Crime News

ಕಾರು ಡಿಕ್ಕಿ, ಪಾದಚಾರಿಗೆ ಗಾಯ

ದಿನಾಂಕ: 23-09-2020 ರಂದು ಸೋಮವಾರಪೇಟೆ ಮಾದಾಪುರ ಕುಂಬೂರು ಕಾಫಿ ತೋಟದ ಬಳಿ ಮುಖ್ಯ ರಸ್ತೆಯಲ್ಲಿ ಕೆಎ-01-ಎಡಿ-1439 ರ  ಕಾರನ್ನು ಅದರ ಚಾಲಕ ಮಂಜುನಾಥ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಚಿಣ್ಣಪ್ಪ ಎಂಬುವವರಿಗೆ ಡಿಕ್ಕಿಪಡಿಸಿದ ಪರಿಣಾಮ ರಸ್ತೆಯಲ್ಲಿ ಬಿದ್ದು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಸೋಮವಾರಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ ಪ್ರಕರಣ

ದಿನಾಂಕ: 24-09-2020 ರಂದು ಸೋಮವಾರಪೇಟೆ ತಾಲ್ಲೂಕು ಹಾಡಗೇರಿ ಗ್ರಾಮದ ಬಳಿ ರಸ್ತೆಯ ತಿರುವಿನಲ್ಲಿ ಕೆಎ-12-ಟಿ-6976 ರ ಟ್ರ್ಯಾಕ್ಟರನ್ನು ಅದರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿದ ಪರಿಣಾಮ ಟ್ರೈಲರ್‍  ಪ್ರತ್ಯೇಕಗೊಂಡು ಪಲ್ಟಿಯಾದ ಪರಿಣಾಮ ಅದರಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಸೋಮವಾರಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ವ್ಯಕ್ತಿ ಆತ್ಮಹತ್ಯೆ

ದಿನಾಂಕ: 18-09-2020 ರಂದು ಸೋಮವಾರಪೇಟೆ ತಾಲ್ಲೂಕು ಸುಂಟಿಕೊಪ್ಪ ಪನ್ಯ ಎಸ್ಟೇಟ್‍ ನಿವಾಸಿ ದರ್ಶನ್‍ ಎಂಬುವವರು ವೈಯಕ್ತಿಕ ವಿಚಾರದಲ್ಲಿ ಜೀವನದಲ್ಲಿ ಜಿಗುಪ್ಸೆಗೊಂಡು ವಿಷ ಸೇವಿಸಿ ಅಸ್ವಸ್ಥಗೊಂಡವರನ್ನು ಚಿಕಿತ್ಸೆಗೆ ಅಸ್ಪತ್ರೆಗೆ ದಾಖಲಿಸಲಾಗಿತ್ತು ಚಿಕಿತ್ಸೆ ಫಲಕಾರಿಯಾಗದೇ ದಿನಾಂಕ: 23-09-2020 ರಂದು ಮೃತಪಟ್ಟಿದ್ದು ಈ ಬಗ್ಗೆ ಮೃತರ ಪತ್ನಿ ನೀಡಿದ ದೂರಿನ ಮೇರೆ ಸುಂಟಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ವಾಹನ ಡಿಕ್ಕಿ, ಪಾದಚಾರಿಗೆ ಗಾಯ.

ದಿನಾಂಕ: 24-09-2020 ರಂದು ವಿರಾಜಪೇಟೆ ತಾಲ್ಲೂಕು ಕಡಂಗಮರೂರು ಗ್ರಾಮದ ಬಳಿ ಮುಖ್ಯ ರಸ್ತೆಯಲ್ಲಿ ಯಾವುದೋ ಒಂದು ವಾಹನವನ್ನು ಅದರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಜಾರಪ್ಪ ಎಂಬುವವರಿಗೆ ಡಿಕ್ಕಿಪಡಿಸಿದ ಪರಿಣಾಮ ಗಾಯಗೊಂಡಿದ್ದು, ಚಾಲಕ ವಾಹನವನ್ನು ನಿಲ್ಲಿಸಿದೇ ಹೋಗಿದ್ದು ಈ ಬಗ್ಗೆ ಪುರುಷೋತ್ತಮ ಎಂಬುವವರು ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.