Crime News

ಅಕ್ರಮ ಮರಳು ಸಾಗಾಟ ಪ್ರಕರಣ

ದಿನಾಂಕ: 25-09-2020 ರಂದು ವಿರಾಜಪೇಟೆ ತಾಲ್ಲೂಕು ಅಮ್ಮತ್ತಿ ಕಾರ್ಮಾಡು ಗ್ರಾಮದ ಬಳಿ ಕೆಎ-12-8523 ರ ಪಿಕ್‍ ಅಪ್‍ ವಾಹನದಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ವಿರಾಜಪೇಟೆ ಗ್ರಾಮಾಂತರ ಠಾಣೆ ಪಿಎಸ್‍ಐ ಮತ್ತು ಸಿಬ್ಬಂದಿಯವರಯ ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.

ಬೈಕ್‍ಗೆ ಕಾರು ಡಿಕ್ಕಿ, ಸವಾರರಿಗೆ ಗಾಯ.

ದಿನಾಂಕ: 25-09-2020 ರಂದು ವಿರಾಜಪೇಟೆ ತಾಲ್ಲೂಕು ಪೊನ್ನಂಪೇಟೆ ಕುಂದ ರಸ್ತೆಯಲ್ಲಿ ಕೆಎ-14-ಎಂ-6348 ರ ಕಾರನ್ನು ಅದರ ಚಾಲಕ ಜಫ್ರೀ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಬೈಕ್‍ಗೆ ಡಿಕ್ಕಿಪಡಿಸಿದ ಪರಿಣಾಮ ಬೈಕ್‍ನಲ್ಲಿದ್ದ ಲೋಕೇಶ್‍ ಮತ್ತು ಮಹೇಶ್‍ ಎಂಬುವವರು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಪೊನ್ನಂಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.