Crime News

 ಪೊಲೀಸ್ ದಾಳಿ, ಅಕ್ರಮ ದಾಸ್ತಾನಿಟ್ಟ ಬೀಟೆ ಮರ ವಶ.

ಕಾಫಿ ತೋಟವೊಂದರಲ್ಲಿ ಅಕ್ರಮವಾಗಿ ಬೀಟೆ ಮರಗಳನ್ನು ಕಡಿದು ಮಾರಾಟ ಮಾಡವ ಉದ್ದೇಶದಿಂದ ದಾಸ್ತಾನು ಇಟ್ಟಿದ್ದನ್ನು ಪತ್ತೆ ಹಚ್ಚಿ ದಾಳಿ ಮಾಡಿ ವಶಪಡಿಸಿಕೊಳ್ಳು ವಲ್ಲಿ ಕುಟ್ಟ ಪೊಲೀಸರು ಯಶಸ್ವಿಯಾಗಿದ್ದಾರೆ.

ದಿನಾಂಕ 15-10-2020 ರಂದು ವಿರಾಜಪೇಟೆ ಪೊಲೀಸ್ ಉಪಾಧೀಕ್ಷಕರಾದ ಶ್ರೀ ಸಿ.ಟಿ. ಜಯಕುಮಾರ್ ರವರಿಗೆ ದೊರೆತ ಖಚಿತ ಮಾಹಿತಿಯನ್ನು ಆಧರಿಸಿ ಕುಟ್ಟ ಠಾಣಾ ಸರಹದ್ದಿನ ಕೆ.ಬಾಡಗ ಗ್ರಾಮದ ಗೌರು ಅಪ್ಪಯ್ಯ ಎಂಬವರ ಕಾಫಿ ತೋಟದಲ್ಲಿ ಆರೋಪಿಗಳಾದ (1) ಬೊಳ್ಳೇರ ಚೆಂಗಪ್ಪ @ ದೀಪಕ್, ಕೆ.ಬಾಡಗ ಗ್ರಾಮ (2) ಅಶ್ರಫ್ ಮತ್ತು ಇತರರು ಸೇರಿ ಅಕ್ರಮವಾಗಿ ಬೀಟೆ ಮರಗಳನ್ನು ಕಡಿದು ಮಾರಾಟ ಮಾಡುವ ಉದ್ದೇಶದಿಂದ ದಾಸ್ತಾನು ಇಟ್ಟಿದ್ದನ್ನು ಪತ್ತೆಹಚ್ಚಿ ದಾಳಿ ನಡೆಸಿದ ಕುಟ್ಟ ಪೊಲೀಸರು ಅಂದಾಜು ರೂ. 4,50,000/- ಮೌಲ್ಯದ ಬೀಟೆ ಮರಗಳನ್ನು ವಶಕ್ಕೆ ಪಡೆದು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಈ ಕಾರ್ಯಾಚರಣೆಯು ಹೆಚ್.ಜೆ.ಚಂದ್ರಪ್ಪ, ಪಿಎಸ್ಐ ಕುಟ್ಟ ಠಾಣೆ ಇವರ ನೇತೃತ್ವದಲ್ಲಿ ನಡೆದಿದ್ದು ಕಾರ್ಯಾಚರಣೆಯಲ್ಲಿ ಎಎಸ್ಐ. ಕೆ.ಜೆ. ಪ್ರಾನ್ಸಿಸ್, ಸಿಬ್ಬಂದಿಗಳಾದ ಎಂ.ಎಸ್ ರಂಜಿತ್, ಎ.ಪಿ. ವಿಶ್ವನಾಥ್ ಮತ್ತು ಪ್ರಭಾಕರ ರವರುಗಳು ಭಾಗಿಯಾಗಿದ್ದು, ಇವರ ಕಾರ್ಯವೈಖರಿಯನ್ನು ಪ್ರಶಂಸಿಸಲಾಗಿದೆ.

 ಮಾದಕ ವಸ್ತು ಸಾಗಾಟ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ.

ಕೊಡಗು ಜಿಲ್ಲೆಯಲ್ಲಿ ಮಾದಕ ವಸ್ತು ಸಾಗಾಟ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆ ಸಿಕೊಂಡಿದ್ದ ವ್ಯಕ್ತಿಯೊಬ್ಬನನ್ನು ಪತ್ತೆಹಚ್ಚುವಲ್ಲಿ ಕೊಡಗು ಜಿಲ್ಲಾ ಡಿಸಿಐಬಿ ಘಟಕದ ಅಧಿಕಾರಿ ಹಾಗೂ ಸಿಬ್ಬಂದಿಯವರು

ಯಶಸ್ವಿಯಾಗಿದ್ದಾರೆ.

ದಿನಾಂಕ 28-08-2020 ರಂದು ರಾತ್ರಿ ಮಡಿಕೇರಿ ನಗರ ವ್ಯಾಪ್ತಿಯ ರಾಜಾಸೀಟ್ ಮುಖ್ಯ ರಸ್ತೆಯಲ್ಲಿ ಸುಮಾರು 9ಲಕ್ಷ ರೂ ಮೌಲ್ಯದ 300ಗ್ರಾಂ ಮಾದಕ ವಸ್ತು “Ampetamine” ಸಾಗಾಟ ಪ್ರಕರಣವನ್ನು ಪತ್ತೆಹಚ್ಚಿದ ಡಿಸಿಐಬಿ ಘಟಕದ ಅಧಿಕಾರಿ ಹಾಗೂ ಸಿಬ್ಬಂದಿಯವರು ಪ್ರಕರಣಕ್ಕೆ ಸಂಬಂಧಿಸಿ ವಿದೇಶಿ ಪ್ರಜೆ ಸೇರಿದಂತೆ ಒಟ್ಟು 7 ಜನ ಆರೋಪಿಗಳನ್ನು ಬಂಧಿಸಿದ್ದರು. ಇದೇ ಪ್ರಕರಣಕ್ಕೆ ಸಂಬಂಧಿಸಿ ದಿನಾಂಕ 15-10-2020 ರಂದು ಮಾದಕ ವಸ್ತು “Ampetamine” ಸಾಗಾಟ ಜಾಲದ ಪ್ರಮುಖ ವ್ಯಕ್ತಿಯಾಗಿ ತಲೆಮರೆಸಿಕೊಂಡಿದ್ದ ಮಡಿಕೇರಿ ತಾಲೋಕು ಅಯ್ಯಂಗೇರಿಯ ಮತ್ತೊರ್ವ ಆರೋಪಿ ಯಾದ ಟಿ.ಇ ಮುಸ್ತಾಪ, ತಂದೆ ಲೇಟ್ ಇಬ್ರಾಹಿಂ, ಪ್ರಾಯ 34 ವರ್ಷ ಕೂಲಿ ಕೆಲಸ, ಹಾಲಿ ವಾಸ ನಾಟಕಲ್ ದೇರಳಕಟ್ಟೆ ಮಂಗಳೂರು. ಸ್ವಂತ ಊರು ಅಯ್ಯಂಗೇರಿ ಗ್ರಾಮ ಈತ ನನ್ನು ದೇರಳಕಟ್ಟೆಯಲ್ಲಿ ಪತ್ತೆಹಚ್ಚಿ ವಶಕ್ಕೆ ಪಡೆದಿರುತ್ತಾರೆ.

ಈ ಕಾರ್ಯಾಚರಣೆಯು ಡಿಸಿಐಬಿ ಇನ್ಸ್ ಪೆಕ್ಟರ್ ಎನ್.ಕುಮಾರ್ ಆರಾಧ್ಯ ರವರ ನೇತೃತ್ವದಲ್ಲಿ ನಡೆದಿದ್ದು, ಕಾರ್ಯಾಚರಣೆಯಲ್ಲಿ ಎಎಸ್ಐ ಹಮೀದ್, ಸಿಬ್ಬಂದಿಗಳಾದ ಬಿ.ಎಲ್. ಯೊಗೇಶ್ ಕುಮಾರ್, ಎಂ.ಎನ್. ನಿರಂಜನ್, ಕೆ.ಆರ್.ವಸಂತ, ಬಿ.ಜೆ ಶರತ್ ರೈ, ಎ.ಆರ್.ಸುರೇಶ್, ವಿ.ಜಿ ವೆಂಕಟೇಶ್, ಕೆ.ಎಸ್.ಅನಿಲ್ ಕುಮಾರ್, ಚಾಲಕ ಕೆ.ಎಸ್. ಶಶಿಕುಮಾರ್ ಮತ್ತು ಸಿಡಿಆರ್ ಸೆಲ್ಲಿನ ರಾಜೇಶ್ ಹಾಗೂ ಗಿರೀಶ್ ಭಾಗವಹಿಸಿದ್ದು ಇವರ ಕಾರ್ಯವನ್ನು ಶ್ಲಾಘಿಸಲಾಗಿದೆ.

ಕೊಡಗು ಜಿಲ್ಲೆಯಲ್ಲಿ ಮಾದಕ ವಸ್ತುಗಳ ಸಾಗಾಟ ಹಾಗೂ ಬಳಕೆಯ ಬಗ್ಗೆ ಸಾಕಷ್ಟು ದೂರುಗಳು ಬರುತ್ತಿದ್ದು ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಗುಪ್ತವಾಗಿ ಮಾಹಿತಿ ನೀಡಿ ಮಾದಕ ವಸ್ತುಗಳ ಬಳಕೆ ಹಾಗೂ ಮಾರಾಟಕ್ಕೆ ಕಡಿವಾಣ ಹಾಕಲು ಸಹಕರಿಸುವಂತೆ ಕೋರಲಾಗಿದೆ.

ಅಕ್ರಮ ಜೂಜಾಟ ಪ್ರಕರಣ

ದಿನಾಂಕ: 15-10-2020 ರಂದು ವಿರಾಜಪೇಟೆ ತಾಲ್ಲೂಕು ಹೊಸಕೋಟೆ ಗ್ರಾಮದ ಪಟ್ರಪಂಡ ಬೋಪಣ್ಣ ಎಂಬುವವರ ಲೈನ್‍ ಮನೆಯ ಮುಂದಿನ ಅಂಗಳದಲ್ಲಿ ಅಕ್ರಮವಾಗಿ ಇಸ್ಪೀಟ್‍ ಜೂಜಾಟವಾಡುತ್ತಿದ್ದ ಪ್ರಕರಣವನ್ನು ವಿರಾಜಪೇಟೆ ಗ್ರಾಮಾಂತರ ಠಾಣೆ ಪಿಎಸ್‍ಐ ವೀಣಾನಾಯಕ್ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಿದ್ದಾರೆ.

ರಸ್ತೆ ಅಪಘಾತ ಪ್ರಕರಣ

ದಿನಾಂಕ: 14-10-2020 ರಂದು ಸೋಮವಾರಪೇಟೆ ತಾಲ್ಲೂಕು ಕೂಡಿಗೆ ಗ್ರಾಮದ ಬಳಿ ಹೆದ್ದಾರಿ ರಸ್ತೆಯಲ್ಲಿ ಕೆಎ-13-ಸಿ-4715 ರ ಗೂಡ್ಸ್‍ ವಾಹನವನ್ನು ಅದರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಎದುರುಗಡೆಯಿಂದ ಬರುತ್ತಿದ್ದ ಕೆಎ-12-ಕೆ-4597 ರ ಬೈಕ್‍ ಗೆ ಡಿಕ್ಕಿಪಡಿಸಿದ ಪರಿಣಾಮ ಸವಾರ ಅಜಿತ್‍ ಎಂಬುವವರು ಗಾಯಗೊಂಡಿದ್ದು ಈ ಬಗ್ಗೆ ರಾಜೇಶ್ ಎಂಬುವವರು ನೀಡಿದ ಪುಕಾರಿನ ಮೇರೆ ಕುಶಾಲನಗರ ಸಂಚಾರ ಠಾಣೆ ಪೊಲೀಸರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.

ಬೈಕ್‍ ಡಿಕ್ಕಿ, ಪಾದಚಾರಗಳಿಗೆ ಗಾಯ.

ದಿನಾಂಕ: 15-10-2020 ರಂದು ಸೋಮವಾರಪೇಟೆ ತಾಲ್ಲೂಕು ಗುಡ್ಡೆಹೊಸೂರು ಗ್ರಾಮದ ಬಳಿ ಸಿದ್ದಾಪುರ ರಸ್ತೆಯಲ್ಲಿ ಕೆಎ-12-ಕ್ಯೂ-3914 ರ ಬೈಕನ್ನು ಅದರ ಸವಾರ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಡು ಹೋಗಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಜಮಲ್‍ ಅನ್ಸಾರಿ, ಶಾಹಿಲ್‍ ಅನ್ಸಾರಿ, ಸನ್ ಫರಾಜ್‍ ಎಂಬುವವರಿಗೆ ಡಿಕ್ಕಿಪಡಿಸಿದ ಪರಿಣಾಮ ಗಾಯಗೊಂಡಿದ್ದು ಈ ಬಗ್ಗೆ ಕುಮಾರ್‍ ಎಂಬುವವರು ನೀಡಿದ ಪುಕಾರಿನ ಮೇರೆ ಕುಶಾಲನಗರ ಸಂಚಾರ ಠಾಣೆ ಪೊಲೀಸರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.