Crime News

ಬೈಕ್‍ ಕಳವು ಪ್ರಕರಣ

ದಿನಾಂಕ: 27-10-2020 ರಂದು ಕುಶಾಲನಗರ ಪಟ್ಟಣದ ಬೈಚನಹಳ್ಳಿಯಲ್ಲಿ ಸಹೀರ್‍ ಅಹಮ್ಮದ್‍ ಎಂಬುವವರ ವರ್ಕ್‍ ಶಾಪ್‍ ನ ಮುಂದೆ ನಿಲ್ಲಿಸಿದ್ದ ಚೆನ್ನಕೇಶವ ಎಂಬುವವರ  ನಂ: ಸಿ.ಆರ್.ಯು-0773 ಯಮಹಾ ಆರ್‍.ಎಕ್ಸ್ ಬೈಕನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಕುಶಾಲನಗರ ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ವ್ಯಕ್ತಿ ಆತ್ಮಹತ್ಯೆ

ದಿನಾಂಕ: 28-10-2020 ರಂದು ಸೋಮವಾರಪೇಟೆ ತಾಲ್ಲೂಕು ಬೆಂಬಳೂರು ಗ್ರಾಮದ ನಿವಾಸಿ ಪ್ರಸನ್ನ ಎಂಬುವವರು ವೈಯಕ್ತಿಕ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ವಿಷ ಸೇವಿಸಿ ಅಸ್ವಸ್ಥಗೊಂಡಿದ್ದವರನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದು ಈ ಬಗ್ಗೆ ಮೃತರ ತಂದೆ ನೀಡಿದ ದೂರಿನ ಮೇರೆ ಶನಿವಾರಸಂತೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಕಳವು ಪ್ರಕರಣ

ದಿನಾಂಕ: 23-10-2020 ರಿಂದ 27-10-2020 ರ ನಡುವಿನ ದಿನಗಳಲ್ಲಿ ಸೋಮವಾರಪೇಟೆ ತಾಲ್ಲೂಕು ಮಾದಾಪುರ ಗ್ರಾಮ ಪಂಚಾಯಿತ ಕಟ್ಟಡದಲ್ಲಿ ಅಳವಡಿಸಿದ್ದ ಎರಡು ಸಿ.ಸಿ ಕ್ಯಾಮೆರಾಗಳನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ಪಿ.ಡಿ.ಒ ಪೂರ್ಣಕುಮಾರ್‍ ರವರು ನೀಡಿದ ಪುಕಾರಿನ ಮೇರೆ ಸೋಮವಾರಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಕಳವು ಪ್ರಕರಣ

ದಿನಾಂಕ: 28-12-2020 ರಂದು ಸೋಮವಾರಪೇಟೆ ತಾಲ್ಲೂಕು ಬಜೆಗುಂಡಿ ಗ್ರಾಮದ ನಿವಾಸಿ ಚಂದ್ರಿಕಾ ಎಂಬುವವರ ಮನೆಯ ಬಾಗಿಲಿಗೆ ಹಾಕಿದ್ದ ಬೀಗವನ್ನು ಯಾರೋ ಕಳ‍್ಳರು ಮರಿದು ಒಳನುಗ್ಗಿ ಸೂಟ್‍ ಕೇಸ್‍ ನಲ್ಲಿ ಇಟ್ಟಿದ್ದ 71,000 ರೂ ಬೆಲೆಬಾಳುವ ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಸೋಮವಾರಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.