News

ದಿನಾಂಕ: 31-10-2020 ರಂದು ಕೊಡಗು ಜಿಲ್ಲಾಡಳಿತದ ವತಿಯಿಂದ  ಕೊಡಗು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ “ಮಹರ್ಶಿ ಶ್ರೀ ವಾಲ್ಮೀಕಿ ಜಯಂತಿ” ಹಾಗೂ ಮಡಿಕೇರಿ ನಗರದ ಕಾರ್ಯಪ್ಪ ವೃತ್ತದ ಬಳಿ ಸ್ವಾತಂತ್ರ್ಯ ಹೋರಾಟಗಾರ, ವೀರ ಸೇನಾನಿ, ಹುತಾತ್ಮ, ಸುಬೇದಾರ್ ಶ್ರೀ ಗುಡ್ಡಮನೆ ಅಪ್ಪಯ್ಯ ಗೌಡ ರವರ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಯವರೊಂದಿಗೆ ಪಾಲ್ಗೊಂಡು ಆಚರಿಸಲಾಯಿತು.

ರಾಷ್ಟ್ರೀಯ ಏಕತಾ ದಿನಾಚರಣೆ:

ಸ್ವತಂತ್ರ ಭಾತರದ ಏಕೀಕರಣ ಪಿತಾಮಹ, ಸ್ವತಂತ್ರ ಭಾರತದ ಪ್ರಥಮ ಗೃಹ ಸಚಿವರಾದ “ಉಕ್ಕಿನ ಮನುಷ್ಯ” ಸರದಾರ್‍ ವಲ್ಲಭ ಬಾಯ್‍ ಪಟೇಲ್‍ ರವರ ಜನ್ಮ ದಿನದ ಸವಿನೆನಪಿಗಾಗಿ ಅಕ್ಟೋಬರ್‍ 31 ರಂದು ಪ್ರತಿ ವರ್ಷ “ರಾಷ್ಟ್ರೀಯ ಏಕತಾ ದಿನ” ವನ್ನಾಗಿ ಆಚರಿಸಲಾಗುತ್ತಿದ್ದು ಈ ಪ್ರಯುಕ್ತ ಕೊಡಗು ಜಿಲ್ಲಾ ಪೊಲೀಸ್ ವತಿಯಿಂದ ಮಡಿಕೇರಿ ನಗರದ ಜನರಲ್‍ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಪೊಲೀಸ್‍ ಕವಾಯತು ನಡೆಸಿ ರಾಷ್ಟ್ರೀಯ ಏಕತಾ ದಿವಸದ ಪ್ರತಿಜ್ಞೆ ಸ್ವೀಕರಿಸಲಾಯಿತು. ಈ ಸಂದರ್ಭ ಪೊಲೀಸ್‍ ಇಲಾಖೆ, ಅರಣ್ಯ ಇಲಾಖೆ ಹಾಗೂ ಗೃಹ ರಕ್ಷಕ ದಳದ ಅಧಿಕಾರಿ ಮತ್ತು ಸಿಬ್ಬಂದಿಯವರು ಪಾಲ್ಗೊಂಡಿದ್ದರು.

ಕೊಡಗು ಜಿಲ್ಲೆಯ ಎಲ್ಲಾ ಪೊಲೀಸ್‍ ಠಾಣೆ ಮತ್ತು ಕಛೇರಿಗಳಲ್ಲಿ ಪೊಲೀಸ್‍ ಅಧಿಕಾರಿ ಮತ್ತು ಸಿಬ್ಬಂದಿಯವರು ರಾಷ್ಟ್ರೀಯ ಏಕತಾ ದಿನದ ಪ್ರತಿಜ್ಞೆ ಸ್ವೀಕರಿರುತ್ತಾರೆ.

ಕೊಡಗು ಜಿಲ್ಲಾ ಪೊಲೀಸ್ ಘಟಕದ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ   ಶ್ರೀ  ಬಟ್ಯಪ್ಪ ರೈ ರವರಿಗೆ ಕೊಡಗು ಜಿಲ್ಲಾ ಪೊಲೀಸ್‍ ವತಿಯಿಂದ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಡುಗೆ ನೀಡಲಾಯಿತು.

CRIME NEWS

ರಸ್ತೆ ಅಪಘಾತ ಪ್ರಕರಣ

ದಿನಾಂಕ: 30-10-2020 ರಂದು ವಿರಾಜಪೇಟೆ ತಾಲ್ಲೂಕು ಚೆನ್ನಂಗೊಲ್ಲಿ ಗ್ರಾಮದ ಬಳಿ ಮುಖ್ಯ ರಸ್ತೆಯಲ್ಲಿ ಕೆಎ-09 ವೈ-847 ರ ಬೈಕನ್ನು ಸವಾರ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ರಸ್ತೆ ಬದಿಯಲ್ಲಿ ನಿಂತಿದ್ದ ಕೆಎ-09-ಎ-5273 ರ ಬಸ್‍ ಮುಂಭಾಗಕ್ಕೆ ಡಿಕ್ಕಿಪಡಿಸಿದ ಪರಿಣಾಮ ಬೈಕ್‍ ಸವಾರ ಗಾಯಗೊಂಡಿದ್ದು ಈ ಬಗ್ಗೆ ಬಸ್ ಚಾಲಕ ಹರ್ಷತ್‍ ಪಾಷಾ ಎಂಬುವವರು ನೀಡಿದ ದೂರಿನ ಮೇರೆ ಗೋಣಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ ಪ್ರಕರಣ

ದಿನಾಂಕ: 30-10-2020 ರಂದು ವಿರಾಜಪೇಟೆ ತಾಲ್ಲೂಕು ತಿತಿಮತಿ ಮಜ್ಜಿಗೆ ಹಳ್ಳ ಗ್ರಾಮದ ಬಳಿ ಮುಖ್ಯ ರಸ್ತೆಯಲ್ಲಿ ಕೆಎ-53 ಎಂ-2885 ರ ಕಾರನ್ನು ಅದರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂಚ ಚಾಲನೆ ಮಾಡಿಕೊಂಡು ಹೋಗಿ ರಸ್ತೆ ಬದಿಯಲ್ಲಿ ನಿಂತಿದ್ದ ಕೆಎ-18-ಎ-4079 ರ ಪಿಕ್‍ ಅಪ್‍ ವಾಹನಕ್ಕೆ ಡಿಕ್ಕಿಪಡಿಸಿದ ಪರಿಣಾಮ ಕಾರಿನಲ್ಲಿದ್ದ ದಯಾನಂದ ಎಂಬುವವರು ಗಾಯಗೊಂಡಿದ್ದು ಈ ಬಗ್ಗೆ ಪಿಕ್‍ ಅಪ್‍ ಚಾಲಕ ನಾಸರ್‍ ಪಾಷಾ ಎಂಬುವವರು ನೀಡಿದ ಪುಕಾರಿನ ಮೇರೆ ಗೋಣಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ ಪ್ರಕರಣ

ದಿನಾಂಕ: 30-10-2020 ರಂದು ವಿರಾಜಪೇಟೆ ತಾಲ್ಲೂಕು ಮಾಕುಟ್ಟ ರಸ್ತೆಯಲ್ಲಿ ಕೆಎಲ್‍-42-ಪಿ-9777 ರ ಟೊಯೊಟಾ ಇಟಿಯೋಸ್ ಕಾರನ್ನು ಅದರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಎದುರುಗಡೆಯಿಂದ ಬರುತ್ತಿದ್ದ ಕೆಎ-02-ಎಂಡಿ-4780 ರ ಮಾರುತಿ ಸ್ವಿಫ್ಟ್‍ ಕಾರಿಗೆ ಡಿಕ್ಕಿಪಡಿಸಿದ ಪರಿಣಾಮ ಕಾರುಗಳು ಜಖಂಗೊಂಡು ಇಟಿಯೋಸ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಮತ್ತು ಮಗು ಗಾಯಗೊಂಡಿದ್ದು ಈ ಬಗ್ಗೆ ಹೇಮಂತ್‍ ಎಂಬುವವರು ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.