Crime News

ರಸ್ತೆ ಅಪಘಾತ ಪ್ರಕರಣ

ದಿನಾಂಕ: 31-10-2020 ರಂದು ವಿರಾಜಪೇಟೆ ತಾಲ್ಲೂಕು ಬಾಳೆಲೆ ಗ್ರಾಮದ ಕೊಡವ ಸಮಾಜ ಬಳಿ ಮುಖ್ಯ ರಸ್ತೆಯಲ್ಲಿ ಕೆಎ-03-ಪಿ-4070 ರ ಜೀಪನ್ನು ಅದರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಎದುರುಗಡೆಯಿಂದ ಬರುತ್ತಿದ್ದ ಕೆಎ-12-ಕ್ಯೂ-1653 ರ ಬೈಕ್‍ ಗೆ ಡಿಕ್ಕಿಪಡಿಸಿದ ಪರಿಣಾಮ ಬೈಕ್‍ ಸವಾರ ಮೋಹನ್‍ ಮುತ್ತು ಎಂಬುವವರು ಗಂಭೀರ ಗಾಯಗೊಂಡಿದ್ದು ಈ ಬಗ್ಗೆ ಗಾಯಾಳುವಿನ ತಂದೆ ಮುರುಗ ಎಂಬುವವರು ನೀಡಿದ ಪುಕಾರಿನ ಮೇರೆ ಪೊನ್ನಂಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಹಲ್ಲೆ ಪ್ರಕರಣ

ದಿನಾಂಕ: 01-11-2020 ರಂದು ಸೋಮವಾರಪೇಟೆ ತಾಲ್ಲೂಕು ಕೊಡ್ಲಿಪೇಟೆ ಕಸೂರು ಗ್ರಾಮದಲ್ಲಿ ‍ಔರಂಗಜೇಬ್‍ ಎಂಬುವವರ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಅಬೂಬಕರ್‍ ಮತ್ತು ಸುರೇಶ್‍ ಎಂಬುವವರಿಗೆ ಕೊಡ್ಲಿಪೇಟೆ ನಿವಾಸಿಗಳಾದ ಎಜಾಸ್‍ ಹುಸೇನ್‍,ಮಮ್ತಾಜ್, ಪುರ್‍ಖಾನ್, ಅದ್ನುನ್ ಎಂಬುವವರು ಅತಿಕ್ರಮ ಪ್ರವೇಶ ಮಾಡಿಕ ಹಲ್ಲೆ ಮಾಡಿದ್ದು , ಇದನ್ನು ಪ್ರಶ್ನಿಸಿದ ‍ಔರಂಗಜೇಬ್‍ ರವರಿಗೂ ಸಹಾ ಬೆದರಿಕೆ ಹಾಕಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಶನಿವಾರಸಂತೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಹಲ್ಲೆ ಪ್ರಕರಣ

ದಿನಾಂಕ: 01-11-2020 ರಂದು ಸೋಮವಾರಪೇಟೆ ತಾಲ್ಲೂಕು ಮರೂರು ಗ್ರಾಮದ ನಿವಾಸಿ ಲೋಕೇಶ, ಪ್ರತಾಪ, ಪ್ರವೀಣ ಮತ್ತು ಇತರರು ಹಾಗೂ  ಹೆಬ್ಬಾಲೆ ಗ್ರಾಮದ ನಿವಾಸಿ ಪ್ರಕಾಶ ಎಂಬುವವರ ನಡುವೆ ಹಣಕಾಸಿನ ವಿಚಾರದಲ್ಲಿ ವೈಷಮ್ಯದಿಂದ ಪರಸ್ಪರ ಅವಾಚ್ಯ ಪದಗಳಿಂದ ಬೈದು ಹಲ್ಲೆ ಮಾಡಿಕೊಂಡಿದ್ದು ಈ ಬಗ್ಗೆ ಉಭಯ ಕಡೆಯವರು ನೀಡಿದ ಪುಕಾರಿನ ಮೇರೆ ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.