Crime News

ಕ್ಷುಲ್ಲಕ ಕಾರಣಕ್ಕೆ ದಂಪತಿಗಳ ಮೇಲೆ ಹಲ್ಲೆ

ದಿನಾಂಕ: 08-11-2020 ರಂದು ಜಗದೀಶ್ ಎಂಬುವವರು ಅವರ ಪತ್ನಿ ಮತ್ತು ಮಕ್ಕಳೊಂದಿಗೆ ಅವರ ಜೀಪಿನಲ್ಲಿ ಮಡಿಕೇರಿ ತಾಲ್ಲೂಕು ಬೇತು ಗ್ರಾಮದ ಬಳಿ ಮುಖ‍್ಯ ರಸ್ತೆಯಲ್ಲಿ ಹೋಗುತ್ತಿರುವಾಗ ಎದುರುಗಡೆಯಿಂದ ಒಂದು ಕಾರಿನಲ್ಲಿ ಬಂದ ಅನ್ಸಾರ್‍ ಮತ್ತು ಇತರ ಮೂವರು ಕಾರನ್ನು ಜೀಪಿಗೆ ಅಡ್ಡಲಾಗಿ ನಿಲ್ಲಿಸಿ ಕ್ಷುಲ್ಲಕ ಕಾರಣಕ್ಕೆ ಅವಾಚ್ಯ ಪದಗಳಿಂದ ಬೈದು ಹಲ್ಲೆ ಮಾಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ನಾಪೋಕ್ಲು ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ಕಳವು ಪ್ರಕರಣ

ದಿನಾಂಕ: 08-11-2020 ರಂದು ಮಡಿಕೇರಿ ತಾಲ್ಲೂಕು ನೀರುಕೊಲ್ಲಿ ಗ್ರಾಮದ ರಘುರಾಮ ಶೆಟ್ಟಿ ಎಂಬುವವರಿಗೆ ಸೇರಿದ ಎಸ್ಟೇಟ್ ನ ಮನೆಯ ಸ್ನಾನದ ಕೋಣೆಯಲ್ಲಿದ್ದ 8,000 ರೂ ಬೆಲೆಬಾಳೂವ ತಾಮ್ರದ ಹಂಡೆಯನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ಎಸ್ಟೇಟ್ ಉಸ್ತುವಾರಿ ನಟರಾಜನ್ ಎಂಬುವವರು ನೀಡಿದ ಪುಕಾರಿನ ಮೇರೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ವ್ಯಕ್ತಿ ಆತ್ಮಹತ್ಯೆ

ದಿನಾಂಕ: 08-11-2020 ರಂದು ಸೋಮವಾರಪೇಟೆ ಪಟ್ಟಣದ ಆಲೆಕಟ್ಟೆ ನಿವಾಸಿ ಮಂಜುನಾಥ ಎಂಬುವವರಿಗೆ ಅನಾರೋಗ್ಯವಿದ್ದು ಚಿಕಿತ್ಸೆ ಪಡೆದರೂ ಗುಣಮುಖವಾಗದೇ ಇದ್ದುದರಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು ಈ ಬಗ್ಗೆ ಮೃತರ ಪತ್ನಿ ನೀಡಿದ ದೂರಿನ ಮೇರೆ ಸೋಮವಾರಪೇಟೆ  ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.