Crime News

ಹಲ್ಲೆ ಪ್ರಕರಣ

ದಿನಾಂಕ: 16-11-2020 ರಂದು ಮಡಿಕೇರಿ ನಗರದ ಎಫ್.ಎಂ.ಸಿ ಕಾಲೇಜು ರಸ್ತೆ ನಿವಾಸಿಗಳಾದ ಮನೋಜ್‍ ಬೋಪಯ್ಯ ಹಾಗೂ ಇತರರು ಮತ್ತು ಅಬಿತ್‍ ಅಪ್ಪಯ್ಯ ಹಾಗೂ ಇತತರು ಕ್ಷುಲ್ಲಕ ಕಾರಣಕ್ಕೆ ಪರಸ್ಪರ ಅವಾಚ್ಯ ಪದಗಳಿಂದ ಬೈದು ಹಲ್ಲೆ ಮಾಡಿಕೊಂಡು ಕೊಲೆ ಬೆದರಿಕೆ ಹಾಕಿದ್ದು ಈ ಬಗ್ಗೆ ಉಭಯ ಕಡೆಯವರು ನೀಡಿದ ಪುಕಾರಿನ ಮೇರೆ ಮಡಿಕೇರಿ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ಕಳವು ಪ್ರಕರಣ

ದಿನಾಂಕ: 13-11-2020 ರಂದು ಮಡಿಕೇರಿ ನಗರದ ಚೈನ್‍ ಗೇಟ್‍ ಬಳಿ ಇರುವ ಅರಣ್ಯ ಇಲಾಖೆ ವಸತಿ ಗೃಹದಲ್ಲಿ ವಾಸವಿರುವ ಬಸವರಾಜ್‍ ಎಂಬುವವರು ಮನೆಗೆ ಬೀಗ ಹಾಕಿಕೊಂಡು ಸ್ವಗ್ರಾಮಕ್ಕೆ ಹೋಗಿ ದಿನಾಂಕ: 16-11-2020 ರಂದು ವಾಪಾಸ್ಸು ಬಂದು ನೋಡಿದಾಗ ಮನೆಯ ಬಾಗಿಲಿನ ಬೀಗವನ್ನು ಯಾರೋ ಕಳ್ಳರು ಮುರಿದು ಒಳನುಗ್ಗಿ ಬೀರುವಿನಲ್ಲಿಟ್ಟಿದ್ದ 52,000 ರೂ ಬೆಲೆಬಾಳುವ ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು  ಹೋಗಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಮಡಿಕೇರಿ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ರಸ್ತೆ ಅಪಘಾತ ಪ್ರಕರಣ

ದಿನಾಂಕ: 15-11-2020 ರಂದು ಸೋಮವಾರಪೇಟೆ ತಾಲ್ಲೂಕು ಬಸವನಹಳ್ಳಿ  ಗ್ರಾಮದ ಬಳಿ ಹೆದ್ದಾರಿ ರಸ್ತೆಯಲ್ಲಿ ಕೆಎಲ್-58-3031 ರ ಕಾರನ್ನು ಅದರ ಚಾಲಕ ಸುಖಿತ್‍ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಬೈಕ್‍ ಗೆ ಡಿಕ್ಕಿಪಡಿಸಿದ ಪರಿಣಾಮ ಸವಾರ ಮೊಹಮ್ಮದ್ ಅಮೀನ್‍ ಎಂಬುವವರು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಕುಶಾಲನಗರ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ಅಕ್ರಮ ಜೂಜಾಟ ಪ್ರಕರಣ

ದಿನಾಂಕ: 16-11-2020 ರಂದು ಸೋಮವಾರಪೇಟೆ ತಾಲ್ಲೂಕು ವಳಗುಂದ ಗ್ರಾಮದ ಬಳಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಇಸ್ಪೀಟ್‍ ಜೂಜಾಟವಾಡುತ್ತಿದ್ದ ಪ್ರರಕಣವನ್ನು ಸೋಮವಾರಪೇಟೆ ಠಾಣೆ ಪಿಎಸ್‍ಐ ಶ್ರೀಧರ್‍ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.

 ರಸ್ತೆ ಅಪಘಾತ , ವ್ಯಕ್ತಿ ಸಾವು.

ದಿನಾಂಕ: 16-11-2020 ರಂದು ಸೋಮವಾರಪೇಟ ತಾಲ್ಲೂಕು ಯಡವಾರೆ ಗ್ರಾಮದ ಬಳಿ ಕ-21-ಸಿ-2222 ರ ಪಿಕ್‍ ಅಪ್‍ ವಾಹನವನ್ನು ಅದರ ಚಾಲಕ ಮೋಹನ್‍ ಕುಮಾರ್‍ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೇ ಮಾಡಿಕೊಂಡು ಹೋಗಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಗಣೇಶ್‍ ಎಂಬುವವರಿಗೆ ಡಿಕ್ಕಿಪಡಿಸಿದ ಪರಿಣಾಮ ಗಾಯಗೊಂಡು ಮೃತಪಟ್ಟಿದ್ದು ಈ ಬಗ್ಗೆ ಮೃತರ ಮಗ ಪ್ರವೀಣ ಎಂಬುವವರು ನೀಡಿದ ಪುಕಾರಿನ ಮೇರೆ ಸೋಮವಾರಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ಅಕ್ರಮ ಗಾಂಜಾ ಸಾಗುವಳಿ ಪ್ರಕರಣ

ದಿನಾಂಕ: 16-11-2020 ರಂದು ಸುಂಟಿಕೊಪ್ಪ ಠಾಣೆ ಎಎಸ್ಐ ಗಣೇಶ್‍ ರವರಿಗೆ ದೊರೆತ ಖಚಿತ ಮಾಹಿತಿ ಮೇರೆ ಸಿಬ್ಬಂದಿಯವರೊಂದಿಗೆ ದಾಳಿ ಮಾಡಿ ಅಕ್ರಮವಾಗಿ ಮನೆಯ ಮುಂದಿನ ಕಾಫಿ ತೋಟದಲ್ಲಿ ಗಾಂಜಾ ಗಿಡಗಳನ್ನು ಸಾಗುವಳಿ ಮಾಡಿದ್ದ ಪ್ರಕರಣವನ್ನು ಪತ್ತೆ ಮಾಡಿ ಸೋಮವಾರಪೇಟೆ ತಾಲ್ಲೂಕು ಹರದೂರು ಗ್ರಾಮದ ನಿವಾಸಿಗಳಾದ  ಮನಮೋಹನ್‍ ಮತ್ತು ನಿತಿನ್‍ ಎಂಬುವವರ ಮೇಲೆ ಸುಂಟಕೊಪ್ಪ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ಅಕ್ರಮ ಮದ್ಯ ಮಾರಾಟ ಪ್ರಕರಣ

ದಿನಾಂಕ: 16-11-2020 ರಂದು ವಿರಾಜಪೇಟೆ ತಾಲ್ಲೂಕು ಮೈತಾಡಿ  ಗ್ರಾಮದ  ನಿವಾಸಿ ಅರುಣ ಎಂಬುವವರು ಅಂಗನವಾಡಿ ಬಳಿ ಸಾರ್ವಜನಿಕ ಸ್ಥಳದಲ್ಲಿ  ಅಕ್ರಮವಾಗಿ ಸಾರ್ವಜನಿಕರಿಗೆ ಮದ್ಯ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ವಿರಾಜಪೇಟೆ ಗ್ರಾಮಾಂತರ ಠಾಣೆ ಪಿಎಸ್‍ಐ ಬೋಜಪ್ಪ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಿದ್ದಾರೆ.

ರಸ್ತೆ ಅಪಘಾತ ಪ್ರಕರಣ

ದಿನಾಂಕ: 16-11-2020 ರಂದು ವಿರಾಜಪೇಟೆ ತಾಲ್ಲೂಕು ಒಂಟಿಯಂಗಡಿ ಗ್ರಾಮದ ಬಳಿ ರಸ್ತೆಯಲ್ಲಿ ಕೆಎ-12-ಯು-2578 ರ ಸ್ಕೂಟರನ್ನು ಅದರ ಸವಾರ ಜಗತ್‍ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡಿ ಹೋಗಿ ರಸ್ತೆ ಬದಿಯ ಮರಕ್ಕೆ ಡಿಕ್ಕಿಪಡಿಸಿದ ಪರಿಣಾಮ ದಿವಿನ್‍, ನಂಜಪ್ಪ, ಜಗತ್‍ ಎಂಬುವವರು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ಹಲ್ಲೆ ಪ್ರಕರಣ

ದಿನಾಂಕ: 16-11-2020 ರಂದು ವಿರಾಜಪೇಟೆ ತಾಲ್ಲೂಕು  ತಿತಿಮತಿ ಗ್ರಾಮದ ಬಳಿ ಮುಖ್ಯ ರಸ್ತೆಯಲ್ಲಿ ಕೆಎ-12-ಬಿ-0875 ರ ಪ್ರಯಾಣಿಕ ಬಸ್ಸನ್ನು ಚಾಲಕ ಜಕ್ರಿಯಾ ಎಂಬುವವರು ಚಾಲನೆ ಮಾಡಿಕೊಂಡು ಹೋಗುತ್ತಿರುವಾಗ ಕೆಎ-53-ಎಂ-2505 ರ ಕಾರನ್ನು ರಸ್ತೆಗೆ ಅಡ್ಡಲಾಗಿ ನಿಲ್ಲಿಸಿ ಏಕಾಏಕಿ ಬಸ್‍ ಚಾಲಕನಿಗೆ ಹಲ್ಲೆ ಮಾಡಿದ್ದು ನಂತರ ಪುನಃ ಬಸ್ಸನ್ನು ಹಿಂಬಾಲಿಸಿಕೊಂಡು ಹೋಗಿ ತಡೆದು ನಿಲ್ಲಿಸಿ ಕಾರಿನಲ್ಲಿದ್ದ  5 ಜನರು ಚಾಲಕನಿಗೆ ಹಲ್ಲೆ ಮಾಡಿ ಕೊಲೆ ಬೆದರಿಕೆ ಹಾಕಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಗೋಣಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.