Crime News

ಕಳವು ಪ್ರಕರಣ

ದಿನಾಂಕ: 16-11-2020 ರಂದು ಮಡಿಕೇರಿ ತಾಲ್ಲೂಕು ಮೇಕೇರಿ ಗ್ರಾಮದ ನಿವಾಸಿ ನವೀನ್‍ ಎಂಬುವವರ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಯಾರೋ ಕಳ್ಳರು ಮನೆಗೆ ನುಗ್ಗಿ ಬ್ಯಾಗ್‍ ನಲ್ಲಿಟ್ಟಿದ್ದ ಚಿನ್ನಾಭರಣ ಹಾಗೂ ಮೊಬೈಲ್ ಸಹಿತ 41,000 ರೂ ಮೌಲ್ಯದ ವಸ್ತುಗಳನ್ನು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ದಿನಾಂಕ: 18-11-2020 ರಂದು ನೀಡಿದ ಪುಕಾರಿನ ಮೇರೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ಕಳವು ಪ್ರಕರಣ 

ದಿನಾಂಕ: 18-11-2020 ರಂದು ಸೋಮವಾರಪೇಟೆ ತಾಲ್ಲೂಕು ಮೂದ್ರವಳ್ಳಿ ಗ್ರಾಮದ ನಿವಾಸಿ ಚಿನ್ನಮ್ಮ ಎಂಬುವವರು ಮನೆಗೆ ಬೀಗ ಹಾಕಿಕೊಂಡು ತೋಟದ ಕೆಲಸಕ್ಕೆ ಹೋಗಿದ್ದಾಗ ಯಾರೋ ಕಳ್ಳರು ಮನೆಯ ಮೇಲ್ಛಾವಣಿ ಹಂಚನ್ನು ತೆಗೆದು ಒಳನುಗ್ಗಿ ಗಾಡ್ರೆಜ್‍ ಬೀರುವನ್ನು ಮುರಿದು ಅದರಲ್ಲಿಟ್ಟಿದ್ದ ಚಿನ್ನದ ಆಭರಣ ನಗದು ಸಹಿತ 10,500 ಮೌಲ್ಯದ ವಸ್ತುಗಳನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ.

 ಹಲ್ಲೆ ಪ್ರಕರಣ

ದಿನಾಂಕ: 17-11-2020 ರಂದು ಸೋಮವಾರಪೇಟೆ ತಾಲ್ಲೂಕು ಸುಂಟಿಕೊಪ್ಪ ಗ್ರಾಮದ ಮಧುರಮ್ಮ ಬಡಾವಣೆ ನಿವಾಸಿ ಮಹೇಂದ್ರ ಎಂಬುವವರಿಗೆ ಅಭಿ, ಪ್ರಶಾಂತ್‍, ಅರುಣ, ಬಾಲು ಎಂಬುವವರು ಹಳೆ ವೈಷಮ್ಯದಿಂದ ಜಗಳ ಮಾಡಿ ಕತ್ತಿಯಿಂದ ಹಲ್ಲೆ ಮಾಡಿ ಗಾಯಗೊಳಿಸಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಸುಂಟಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ರಸ್ತೆ ಅಪಘಾತ ಪ್ರಕರಣ

ದಿನಾಂಕ: 18-11-2020 ರಂದು ಸೋಮವಾರಪೇಟೆ ತಾಲ್ಲೂಕು ಯಡವನಾಡು ಗ್ರಾಮದ ಬಳಿ ಮುಖ್ಯ ರಸ್ತೆಯಲ್ಲಿ ಕೆಎ-05-2212 ರ ಕಾರನ್ನು ಅದರ ಚಾಲಕ ರವಿ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ  ಮಾಡಿದ ಪರಿಣಾಮ ಕಾರು ರಸ್ತೆ ಬದಿಯ ಚರಂಡಿಗೆ ಮಗುಚಿಬಿದ್ದುದರಿಂದ ಕಾರಿನಲ್ಲಿದ್ದ ಉಮೇಶ ಎಂಬುವವರು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಸೋಮವಾರಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.