Crime News

ಅಕ್ರಮ ಮದ್ಯ ಮಾರಾಟ ಪ್ರಕರಣ

ದಿನಾಂಕ: 21-11-2020 ರಂದು ವಿರಾಜಪೇಟೆ ತಾಲ್ಲೂಕು ಬೊಳ್ಳುಮಾಡು ಗ್ರಾಮದ  ನಿವಾಸಿ ಉಮೇಶ್ ಎಂಬುವವರು ಬಸ್‍ ತಂಗುದಾಣದ ಬಳಿ ಸಾರ್ವಜನಿಕ ಸ್ಥಳದಲ್ಲಿ  ಅಕ್ರಮವಾಗಿ ಸಾರ್ವಜನಿಕರಿಗೆ ಸೇವನೆಗೆ ಅವಕಾಶ ಮಾಡುತ್ತಿದ್ದ ಪ್ರಕರಣವನ್ನು ವಿರಾಜಪೇಟೆ ಗ್ರಾಮಾಂತರತ ಠಾಣೆ ಎಎಸ್‍ಐ ಶಿವಣ್ಣ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಿದ್ದಾರೆ.

ಕಳವು ಪ್ರಕರಣ

ದಿನಾಂಕ: 24-10-2020 ರಿಂದ 21-11-2020 ರ ನಡುವಿನ ದಿನಗಳಲ್ಲಿ ವಿರಾಜಪೇಟೆ ತಾಲ್ಲೂಕು ಹರಿಹರ ಗ್ರಾಮದ ನಿವಾಸಿ ಪೂವಮ್ಮ ಎಂಬುವವರ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಯಾರೋ ಕಳ್ಳರು ಮನೆಯ ಹಿಂಬಾಗಿಲಿನ ಬಾಗಿಲನ್ನು ಮುರಿದು ಒಳನುಗ್ಗಿ ಮನೆಯಲ್ಲಿಟ್ಟಿದ್ದೊಂದು ಬಂದೂಕುನ್ನು ಕಳವು ಮಾಡಿಕೊಂಡು ಹೋಗಿದ್ದು ಈ ಬಗಗೆ ನೀಡಿದ ಪುಕಾರಿನ ಮೇರೆ ಶ್ರೀಮಂಗಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಹಲ್ಲೆ ಪ್ರಕರಣ

ದಿನಾಂಕ: 21-11-2020 ರಂದು ಸೋಮವಾರಪೇಟೆ ತಾಲ್ಲೂಕು ಬಸವನಹಳ್ಳಿ ಗ್ರಾಮದ ನಿವಾಸಿ ಪರಮೇಶ ಎಂಬುವವರಿಗೆ ಅದೇ ಗ್ರಾಮದ ನಿವಾಸಿಗಳಾದ ಗೋಪಾಲ, ಬಾಲಾಜಿ, ಸರಿತ, ಪವಿತ್ರ ಎಂಬುವವರು ಕ್ಷುಲ್ಲಕ ಕಾರಣಕ್ಕೆ ದಾರಿ ತಡೆದು ಹಲ್ಲೆ ಮಾಡಿ ಗಾಯಪಡಿಸಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಕಳವು ಪ್ರಕರಣ

ದಿನಾಂಕ: 21-11-2020 ರಂದು ಸೋಮವಾರಪೇಟೆ ತಾಲ್ಲೂಕು ಮಣಜೂರು ಗ್ರಾಮದ ನಿವಾಸಿ ಮಂಜುನಾಥ ಎಂಬುವವರ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಯಾರೋ ಕಳ್ಳರು ಬಾಗಿಲಿಗೆ ಹಾಕಿದ್ದ ಬೀಗವನ್ನು ಮುರಿದು ಒಳನುಗ್ಗಿ ನಗದು ಸಹಿತ 1,07,000 ರೂ ಬೆಲೆಬಾಳುವ ಚಿನ್ನಾಭರಣ ಗಳನ್ನು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.