Crime News

ರಸ್ತೆ ಅಪಘಾತ ಪ್ರಕರಣ

ದಿನಾಂಕ: 19-11-2020 ರಂದು ಸೋಮವಾರಪೇಟೆ ತಾಲ್ಲೂಕು ಸೀಗೆಹೊಸೂರು ಗ್ರಾಮದ ಬಳಿ ಸಾರ್ವಜನಿಕ ರಸ್ತೆಯಲ್ಲಿ ಕೆಎ-12-ಎಸ್‍-8668 ರ ಬೈಕನ್ನು ಸವಾರ ದಿವಾಕರ್‍ ಎಂಬುವವರು ಅತಿವೇಗ ಮತ್ತು ಅಜಾರೂಕತೆಯಿಂದ ಚಾಲನೆ ಮಾಡಿದ ಪರಿಣಾಮ ಹಿಂಬಂದಿ ಸವಾರ ಪ್ರಭಾಕರ್‍ ಎಂಬುವವರು ರಸ್ತೆಗೆ ಬಿದ್ದು ಗಾಯಗೊಂಡಿದ್ದು ಈ ಬಗ್ಗೆ ರಾಜ ಎಂಬುವವರು ನೀಡಿದ ಪುಕಾರಿನ ಮೇರೆ ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ಕಳವು ಪ್ರಕರಣ

ದಿನಾಂಕ: 12-11-2020 ರಿಂದ 23-11-2020 ರ ನಡುವಿನ ದಿನಗಳಲ್ಲಿ ವಿರಾಜಪೇಟೆ ತಾಲ್ಲೂಕು ಪಾಲಿಬೆಟ್ಟ ಗ್ರಾಮದ ಪದ್ಮನಾಭ ಎಂಬುವವರು ಬೆಳೆದಿದ್ದ 4000 ರೂ ಬೆಲೆಬಾಳುವ ಶುಂಠಿಯನ್ನು ಕೃಷಿ ಮಾಡಿದ್ದ ಜಾಗದಿಂದ ತೆಗೆದು ಕಳ್ಳತನ ಮಾಡಿಕೊಂಡು ಹೋಗಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಸಿದ್ದಾಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.