Crime News

ಕೋವಿ ಕಳವು ಪ್ರಕರಣ ಪತ್ತೆ, ಆರೋಪಿಗಳ ಬಂಧನ:

ವಿರಾಜಪೇಟೆ ತಾಲ್ಲೂಕು ಹರಿಹರ ಗ್ರಾಮದ ಮನೆಯೊಂದರಲ್ಲಿ ಕೋವಿ ಕಳವು ಮಾಡಿದ್ದ ಪ್ರಕರಣವನ್ನು ಶ್ರೀಮಂಗಲ ಠಾಣೆ ಪೊಲೀಸರು ಪತ್ತೆ ಮಾಡಿ ಆರೋಪಿಗಳನ್ನು ಬಂಧಿಸಿ ಕಳವು ಮಾಡಲಾಗಿದ್ದ ಕೋವಿಯನ್ನು ವಶಕ್ಕೆ ಪಡೆದಿರುತ್ತಾರೆ.

ದಿನಾಂಕ: 24-10-2020 ರಿಂದ 21-11-2020 ರ ನಡುವಿನ ದಿನಗಳಲ್ಲಿ ವಿರಾಜಪೇಟೆ ತಾಲ್ಲೂಕು ಹರಿಹರ ಗ್ರಾಮದ ನಿವಾಸಿ ಪೂವಮ್ಮ ಎಂಬುವವರ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಯಾರೋ ಕಳ್ಳರು ಮನೆಯ ಹಿಂಬಾಗಿಲಿನ ಬಾಗಿಲನ್ನು ಮುರಿದು ಒಳನುಗ್ಗಿ ಮನೆಯಲ್ಲಿಟ್ಟಿದ್ದ ಒಂದು ಬಂದೂಕುನ್ನು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಶ್ರೀಮಂಗಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದರು.

ಪ್ರಕರಣ ತನಿಖೆ ಕೈಗೊಂಡ ಶ‍್ರೀಮಂಗಲ ಠಾಣೆ ಪಿಎಸ್‍ಐ ಹೆಚ್‍.ಜೆ ಚಂದ್ರಪ್ಪ ನೇತೃತ್ವದ ತಂಡವು ಆರೋಪಿಗಳಾದ ಕಿರಗೂರು ಗ್ರಾಮದ ಸುಮಂತ್, ಪಿರಿಯಾಪಟ್ಟಣ ತಾಲ್ಲೂಕು ನೇರಳೆಗುಪ್ಪೆ ಗ್ರಾಮದ ನಿವಾಸಿಗಳಾದ ಸುನಿಲ್‍ ಕುಮಾರ್‍, ನವೀನ್‍ ಮತ್ತು ದಯಾನಂದ್‍ ಎಂಬುವವರನ್ನು ದಸ್ತಗಿರಿ ಮಾಡಿ ಕಳವು ಮಾಡಿದ್ದ ಬಂದೂಕು, ಕೃತ್ಯಕ್ಕೆ ಉಪಯೋಗಿಸಿದ ಬೈಕನ್ನು ವಶಕ್ಕೆ ಪಡೆದಿರುತ್ತಾರೆ.

ಈ ಪ್ರಕರಣದ ಪತ್ತೆ ಕಾರ್ಯದಲ್ಲಿ ಪಿ.ಎಸ್‍.ಐ ಹೆಚ್‍.ಜೆ ಚಂದ್ರಪ್ಪ, ಎಎಸ್‍ಐ ಸಾಬು, ಎ.ಎಸ್.ಐ ಫ್ರಾನ್ಸಿಸ್, ಸಿಬ್ಬಂದಿಯವರಾದ ವಿಶ್ವನಾಥ, ಮನೋಹರ್, ಮನು, ರಂಜಿತ್, ಸ್ಟೀಫನ್, ಗಣೇಶ್‍  ಪಾಲ್ಗೊಂಡಿದ್ದರು. ಪೊಲೀಸ್ ಅಧಿಕಾರಿ ಮತ್ತುಸಿಬ್ಬಂದಿಯವರ ಕಾರ್ಯವನ್ನು ಶ್ಲಾಘಿಸಲಾಗಿದೆ.

ವ್ಯಕ್ತಿ ಕಾಣೆ ಪ್ರಕರಣ

ದಿನಾಂಕ: 27-11-2020 ರಂದು ಮಡಿಕೇರಿ ನಗರದ ಮಹದೇವಪೇಟೆ ನಿವಾಸಿ ಅಗಸ್ತ್ಯ ಎಂಬುವವರು ಅವರ ಜುವೆಲ್ಲರಿ ಮಳಿಗೆಯಿಂದ ಯಾರಿಗೂ ತಿಳಿಸದೆ ಹೊರಗೆ ಹೋದವರು ವಾಪಾಸ್ಸು ಬಾರದೇ ಕಾಣೆಯಾಗಿದ್ದು ಈ ಬಗ್ಗೆ ಮಡಿಕೇರಿ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಅಕ್ರಮ ಲಾಟರಿ ಮರಾಟ ಪ್ರಕರಣ

ದಿನಾಂಕ: 28-11-2020 ರಂದು ವಿರಾಜಪೇಟೆ ಪಟ್ಟಣದ ಮಟನ್‍ ಮಾರ್ಕೆಟ್‍ ಜಂಕ್ಷನ್‍ ಬಳಿ ಅಕ್ರಮವಾಗಿ ಸಾರ್ವಜನಿಕರಿಗೆ ಕೇರಳ ರಾಜ್ಯದ ಲಾಟರಿ ಟಿಕೆಟ್‍ಗಳನ್ನು ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ವಿರಾಜಪೇಟೆ ಪಟ್ಟಣ ಠಾಣೆ ಪಿ.ಎಸ್‍.ಐ ಜಗದೀಶ್ ಧೂಳಶೆಟ್ಟಿ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪೆರಂಬಾಡಿ ನಿವಾಸಿ ಲತೀಫ್‍ ಎಂಬುವವರ ವಿರುದ್ದ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಅಕ್ರಮ ಜೂಜಾಟ ಪ್ರಕರಣ

ದಿನಾಂಕ: 28-11-2020 ರಂದು ಸೋಮವಾರಪೇಟೆ ತಾಲ್ಲೂಕು ಕೂಡಿಗೆ ಗ್ರಾಮದ  ಕ್ರೀಡಾ ಶಾಲೆಯ ಬಳಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಇಸ್ಪೀಟ್‍ ಜೂಜಾಟವಾಡುತ್ತಿದ್ದ ಪ್ರರಕಣವನ್ನು ಕುಶಾಲನಗರ ಗ್ರಾಮಾಂತರ ಠಾಣೆ ಪಿಎಸ್‍ಐ ಶಿವಶಂಕರ್ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಜೂಜಾಟಕ್ಕೆ ಉಪಯೋಗಿಸಿದ ನಗದು ಹಣ, ಇಸ್ಪೀಟ್‍ ಕಾರ್ಡ್‍ ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.

ಅಕ್ರಮ ಮದ್ಯ ಮಾರಾಟ ಪ್ರಕರಣ

ದಿನಾಂಕ: 28-11-2020 ರಂದು ಸೋಮವಾರಪೇಟೆ ತಾಲ್ಲೂಕು ಗರಗಂದೂರು  ಗ್ರಾಮದ  ರಾಜಪ್ರಭಾ ಪೈಸಾರಿ ನಿವಾಸಿ ಶಿವಶಂಕರ್ ಎಂಬುವವರು ಅವರ ಮನೆಯಲ್ಲಿ ಮದ್ಯವನ್ನು ಇಟ್ಟುಕೊಂಡು ಅಕ್ರಮವಾಗಿ ಸಾರ್ವಜನಿಕರಿಗೆ ಮದ್ಯ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಸುಂಟಿಕೊಪ್ಪ ಠಾಣೆ ಪಿಎಸ್‍ಐ ಪುನೀತ್ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಿದ್ದಾರೆ.