Crime News
ರಸ್ತೆ ಅಪಘಾತ ಪ್ರಕರಣ
ದಿನಾಂಕ: 27-11-2020 ರಂದು ಮಡಿಕೇರಿ ತಾಲ್ಲೂಕು ಇಬ್ನಿವಳವಾಡಿ ಗ್ರಾಮದ ಬಳಿ ಹೆದ್ದಾರಿ ರಸ್ತೆಯಲ್ಲಿ ಕೆಎ-05-ಎಂವಿ-0942 ರ ಕಾರನ್ನು ಅದರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಎದುರುಗಡೆಯಿಂದ ಬರುತ್ತಿದ್ದ ಕೆಎ-12-ಕೆ-3177 ರ ಬೈಕ್ ಗೆ ಡಿಕ್ಕಿಪಡಿಸಿದ ಪರಿಣಾಮ ಸವಾರರಾದ ನಿಜಾಮುದ್ದೀನ್, ಮುಬಷಿರ್ ಎಂಬುವವರು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಸುಂಟಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
ಅಕ್ರಮ ಮದ್ಯ ಮಾರಾಟ ಪ್ರಕರಣ
ದಿನಾಂಕ: 29-11-2020 ರಂದು ಸೋಮವಾರಪೇಟೆ ತಾಲ್ಲೂಕು ಬಜೆಗುಂಡಿ ಗ್ರಾಮದ ನಿವಾಸಿ ಪದ್ಮನಾಭ ಎಂಬುವವರು ಅವರ ಅಂಗಡಿಯಲ್ಲಿ ಮದ್ಯವನ್ನು ಇಟ್ಟುಕೊಂಡು ಅಕ್ರಮವಾಗಿ ಸಾರ್ವಜನಿಕರಿಗೆ ಮದ್ಯ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಸೋಮವಾರಪೇಟೆ ಠಾಣೆ ಪಿಎಸ್ಐ ಶ್ರೀಧರ್ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಿದ್ದಾರೆ.