Crime News

ಹಲ್ಲೆ ಪ್ರಕರಣ

ದಿನಾಂಕ: 06-12-2020 ರಂದು ಮಡಿಕೇರಿ ತಾಲ್ಲೂಕು ಅಯ್ಯಂಗೇರಿ ಗ್ರಾಮದ ನಿವಾಸಿ ಆಶಿಕ್‍ ಎಂಬುವವರು ಅವರ ತಂದೆಯವರೊಂದಿಗೆ ಬೈಕ್ ನಲ್ಲಿ ಹೋಗುತ್ತಿರುವಾಗ ಅದೇ ಗ್ರಾಮದ ನಿವಾಸಿ ಭೀಮಯ್ಯ ಎಂಬುವವರು ಹಳೆ ವೈಷಮ್ಯದಿಂದ ತಡೆದು ನಿಲ್ಲಿಸಿ ದೊಣ್ಣೆಯಿಂದ ಹಲ್ಲೆ ಮಾಡಿ ಕೊಲೆ ಬೆದರಿಕೆ ಹಾಕಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಭಾಗಮಂಡಲ ಠಾಣೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಅಕ್ರಮ ಮದ್ಯ ಮಾರಾಟ ಪ್ರಕರಣ

ದಿನಾಂಕ:06-12-2020 ರಂದು ಸೋಮವಾರಪೇಟೆ ತಾಲ್ಲೂಕು ಸುಳುಗಳಲೆ  ಗ್ರಾಮದ  ನಿವಾಸಿ ಮಹಿಳೆಯೊಬ್ಬರು ಗೋಪಾಲಪುರ ಗ್ರಾಮದ ಬಸ್‍ ತಂಗುದಾಣದ ಬಳಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯ ಇಟ್ಟುಕೊಂಡುಸಾರ್ವಜನಿಕರಿಗೆ ಮದ್ಯ ಸೇವನೆಗೆ ಅವಕಾಶ ಮಾಡುತ್ತಿದ್ದ ಪ್ರಕರಣವನ್ನು ಶನಿವಾರಸಂತೆ ಠಾಣೆ ಪಿಎಸ್‍ಐ ದೇವರಾಜ್ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಿದ್ದಾರೆ.

ಅಕ್ರಮ ಮದ್ಯ ಮಾರಾಟ ಪ್ರಕರಣ

ದಿನಾಂಕ: 06-12-2020 ರಂದು ಸೋಮವಾರಪೇಟೆ ತಾಲ್ಲೂಕು ಕೊಡ್ಲಿಪೇಟೆ  ಗ್ರಾಮದ  ಹೊಸ ಮುನ್ಸಿಪಾಲಿಟಿ ಬಳಿ  ಅಕ್ರಮವಾಗಿ ಕಳ್ಳಭಟ್ಟಿ ಮದ್ಯವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಶನಿವಾರಸಂತೆ ಠಾಣೆ ಪಿಎಸ್‍ಐ ದೇವರಾಜ್ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಸಂದೀಪ್‍ ಎಂಬುವವರ ವಿರುದ್ದ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಿದ್ದಾರೆ.

ಅಕ್ರಮ ಬೀಟೆ ಮರ ಸಾಗಾಟ ಪ್ರಕರಣ

ದಿನಾಂಕ: 06-12-2020 ರಂದು ಸೋಮವಾರಪೇಟೆ ತಾಲ್ಲೂಕು ಗುಡ್ಡೆಹೊಸೂರು ಗ್ರಾಮದ ಬಳಿ ಗೂಡ್ಸ್‍ ವಾಹನದಲ್ಲಿ ಅಕ್ರಮವಾಗಿ 2 ಲಕ್ಷ ರೂ ಮೌಲ್ಯದ ಬೀಟಿ ಮರದ ನಾಟಾಗಳನ್ನು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಕುಶಾಲನಗರ ಗ್ರಾಮಾಂತರ ಠಾಣೆ ಪಿ.ಎಸ್.ಐ ಶಿವಶಂಕತ್ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.