Crime News

ರಸ್ತೆ ಅಪಘಾತ ಪ್ರಕರಣ

ದಿನಾಂಕ: 09-12-2020 ರಂದು ಮಡಿಕೇರಿ ತಾಲ್ಲೂಕು ಜೋಡುಪಾಲ ಗ್ರಾಮದ ಬಳಿ ಹೆದ್ದಾರಿ ರಸ್ತೆಯಲ್ಲಿ ಕೆಎ-21-ಪಿ-3428 ರ ಕಾರನ್ನು ಅದರ ಚಾಲಕ ವಿಶ್ವನಾಥ ಶೆಟ್ಟಿ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಎದುಗಡೆಯಿಂದ ಬರುತ್ತಿದ್ದ ಕೆಎ-11-ಬಿ-7607 ರ ಲಾರಿಗೆ ಡಿಕ್ಕಿಪಡಿಸಿದ ಪರಿಣಾಮ ಕಾರಿನಲ್ಲಿದ್ದ ಜಯರಾಮ ಶೆಟ್ಟಿ ಎಂಬುವವರು ಗಾಯಗೊಂಡಿದ್ದು ಈ ಬಗ್ಗೆ ಲಾರಿ ಚಾಲಕ ನವೀನ್ ಎಂಬುವವರು ನೀಡಿದ ಪುಕಾರಿನ ಮೇರೆ ಮಡಿಕೇರಿ ಗ್ರಾಮಾಂತರ ಠಾಣ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ಕಳವು ಪ್ರಕರಣ

ದಿನಾಂಕ: 15-10-2020 ರಿಂದ 09-12-2020 ರ ನಡುವಿನ ದಿನಗಳಲ್ಲಿ ವಿರಾಜಪೇಟೆ ಪಟ್ಟಣದ ರಾಮನಗರದಲ್ಲಿರುವ ರಂಜಿ ಪೂಣಚ್ಚ ರವರ ತೋಟದ ಮನೆಯ ಬಳಿ ಇಟ್ಟಿದ್ದ ರೂ. 85,000 ರೂ ಮೌಲ್ಯದ ಜೆನರೇಟರನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ರಸ್ತೆ ಅಪಘಾತ ಪ್ರಕರಣ

ದಿನಾಂಕ: 09-12-2020 ರಂದು ವಿರಾಜಪೇಟೆ ನಗರದ ಪಂಜರಪೇಟೆ ಬಳಿ ಮುಖ‍್ಯ ರಸ್ತೆಯಲ್ಲಿ ಕೆಎ-12-ಎ-5631 ರ ಆಟೋ ರಿಕ್ಷಾವನ್ನು ಅದರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಕೆಎ-09-ಹೆಚ್‍ಡಬ್ಲ್ಯೂ-5398 ರ ಸ್ಕೂಟರ್ ಗೆ ಡಿಕ್ಕಿಪಡಿಸಿದ ಪರಿಣಾಮ ಸ್ಕೂಟರ್‍ ಸವಾರ ಗಾಯಗೊಂಡಿದ್ದು ಈ ಬಗ್ಗೆ ಗಾಯಾಳು ಶರಣ್‍ ಎಂಬುವವರು ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಅಕ್ರಮ ಲಾಟರಿ ಮರಾಟ ಪ್ರಕರಣ

ದಿನಾಂಕ: 09-12-2020 ರಂದು ಪೊನ್ನಂಪೇಟೆ ತಾಲ್ಲೂಕು ಬಾಳೆಲೆ ಗ್ರಾಮದಲ್ಲಿ ಅಕ್ರಮವಾಗಿ ಸಾರ್ವಜನಿಕರಿಗೆ ಕೇರಳ ರಾಜ್ಯದ ಲಾಟರಿ ಟಿಕೆಟ್‍ಗಳನ್ನು ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಪೊನ್ನಂಪೇಟೆ ಠಾಣೆ ಪಿ.ಎಸ್‍.ಐ ಡಿ.ಕುಮಾರ್ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಕುಟ್ಟ ಗ್ರಾಮದ ನಿವಾಸಿ ರಾಜ ಎಂಬುವವರ ವಿರುದ್ದ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಅಕ್ರಮ ಮದ್ಯ ಮಾರಾಟ ಪ್ರಕರಣ

ದಿನಾಂಕ:09-12-2020 ರಂದು ಸೋಮವಾರಪೇಟೆ ತಾಲ್ಲೂಕು ಚಿನ್ನೇನಹಳ್ಳಿ  ಗ್ರಾಮದ  ನಿವಾಸಿ ಹನುಮಂತ ರೆಡ್ಡಿ ಎಂಬುವವರು  ಅವರ ವಾಸದ ಮನೆಯ ಬಳಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯ ಇಟ್ಟುಕೊಂಡುಸಾರ್ವಜನಿಕರಿಗೆ ಮದ್ಯ ಸೇವನೆಗೆ ಅವಕಾಶ ಮಾಡುತ್ತಿದ್ದ ಪ್ರಕರಣವನ್ನು ಕುಶಾಲನಗರ ಗ್ರಾಮಾಂತರ  ಠಾಣೆ ಪಿಎಸ್‍ಐ ಶಿವಶಂಕರ್ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಿದ್ದಾರೆ.

ಹಲ್ಲೆ ಪ್ರಕರಣ

ದಿನಾಂಕ: 09-12-2020 ರಂದು ಸೋಮವಾರಪೇಟೆ ತಾಲ್ಲೂಕು ಶನಿವಾರಸಂತೆ ತ್ಯಾಗರಾಜ ಕಾಲೋನಿ ನಿವಾಸಿ ತನ್ಮಯ್ ಎಂಬುವವರು ಎಸ್ಸಾರ್‍ ಪೆಟ್ರೋಲ್‍ ಬಂಕ್‍ ಬಳಿ ಇರುವಾಗ ಕೆಎ-18-ಪಿ-3836 ರ ಕಾರಿನಲ್ಲಿ ನಂದೀಶ್‍ ಮತ್ತು ಚರಣ ಎಂಬುವವರು ಹಳೆ ವೈಷಮ್ಯದಿಂದ ಅವಾಚ್ಯ ಪದಗಳಿಂದ ಬೈದು ದೊಣ್ಣೆಯಿಂದ ಹಲ್ಲೆ ಮಾಡಿ ಗಾಯಪಡಿಸಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಶನಿವಾರಸಂತೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.