Crime News

ರಸ್ತೆ ಅಪಘಾತ ಪ್ರಕರಣ

ದಿನಾಂಕ: 10-12-2020 ರಂದು ವಿರಾಜಪೇಟೆ ಪಟ್ಟಣದ ಮೀನುಪೇಟೆ ಬಳಿ ಕೆಎ-12-ಎಂ-3391 ರ ಚಾಲಕ ಪುನೀತ್‍ ಎಂಬುವವರು ಕಾರನ್ನು ಅತಿವೇಗ ಮತ್ತುಅಜಾಗರೂಕತೆಯಿಂದ ಚಾಲನೆ  ಮಾಡಿಕೊಂಡು ಹೋಗಿ ಮಧುಕುಮಾರ್‍ ಎಂಬುವವರಿಗೆ ಡಿಕ್ಕಿಪಡಿಸಿದ ಪರಿಣಾಮ ಬಿದ್ದು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ ಪ್ರಕರಣ

ದಿನಾಂಕ: 10-12-2020 ರಂದು ಪೊನ್ನಂಪೇಟೆ ತಾಲ್ಲೂಕು ಅರವತ್ತೊಕ್ಲು ಗ್ರಾಮದ ಗ್ರಾಮ ಪಂಚಾಯತ್ ಕಛೇರಿ ಬಳಿ ಮುಖ್ಯ ರಸ್ತೆಯಲ್ಲಿ ಕೆಎ-19-ಜೆಡ್-7761 ರ ಕಾರನ್ನು ಅದರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಬೈಕ್ ಗೆ ಡಿಕ್ಕಿಪಡಿಸಿದ ಪರಿಣಾಮ ಬೈಕ್ ಸವಾರ ಶಂಕರನಾರಾಯಣ ಎಂಬುವವರು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಗೋಣೀಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಕಳವು ಪ್ರಕರಣ

ಸೋಮವಾರಪೇಟೆ ತಾಲ್ಲೂಕು ಕೂಡುಮಂಗಳೂರು ಗ್ರಾಮದ ನಿವಾಸಿ ತಂಗಮ್ಮ ಎಂಬುವವರು ಅವರ ಮನೆಯ ಬೀರುವಿನಲ್ಲಿಟ್ಟಿದ್ದ ಚಿನ್ನಾಭರಣಗಳನ್ನು ಪರಿಶೀಲಿಸಿದಾಗ ಚಿನ್ನದ ಚೈನ್‍ ಮತ್ತು ಬಳೆಗಳು ಇಲ್ಲದಿರುವುದು ಕಂಡುಬಂದಿರುತ್ತದೆ. ಮನೆಗೆ ಅಳವಡಿಸಿದ್ದ ಸಿ.ಸಿ ಕ್ಯಾಮೆರಾ ಪರಿಶೀಲಿಸಿದಾಗ ದಿನಾಂಕ: 25-11-2020 ರಂದು ಅವರ ತೋಟದಲ್ಲಿ ಕೆಲಸ ಮಾಡಿಕೊಂಡಿದ್ದ ದಯಾನಂದ ಎಂಬುವವರು ಮನೆಯ ಕೋಣೆಯೋಳಗೆ ಹೋಗಿರುವುದು ಕಂಡುಬಂದಿದ್ದು ಒಟ್ಟು 4,15,000 ರೂ ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿರುವ ಬಗ್ಗೆ ದಿನಾಂಕ: 10-12-2020 ರಂದು ನೀಡಿದ ಪುಕಾರಿನ ಮೇರೆ ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.