Crime News

ಹಲ್ಲೆ ಪ್ರಕರಣ

ದಿನಾಂಕ: 13-12-2020 ರಂದು ಮಡಿಕೇರಿ ತಾಲ್ಲೂಕು ಪೇರೂರು ಗ್ರಾಮದ ನಿವಾಸಿ ಆನೆಯಡ ಉದಯ್‍ ಎಂಬುವವರಿಗೆ ಅದೇ ಗ್ರಾಮದ ನಿವಾಸಿ ಆನೆಯಡ ರೋಶನ್‍ ಎಂಬುವವರು ಕುಟುಂಬದ ವಿಚಾರದಲ್ಲಿ ಜಗಳ ಮಾಡಿ ಕೊಲೆ ಮಾಡುವ ಉದ್ದೇಶದಿಂದ ಚಾಕುವಿನಿಂದ ಹಲ್ಲೆ ಮಾಡಿ ಗಾಯಪಡಿಸಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ನಾಪೋಕ್ಲು ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ ಪ್ರಕರಣ

ದಿನಾಂಕ: 12-12-2020 ರಂದು ಪೊನ್ನಂಪೇಟೆ ತಾಲ್ಲೂಕು ಗೋಣಿಕೊಪ್ಪ ಬೈಪಾಸ್ ರಸ್ತೆಯಲ್ಲಿ ಕೆಎ-64-ಹೆಚ್-8739 ರ ಬೈಕನ್ನು ಅದರ ಸವಾರ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಗುಣಶೇಖರ್‍ ಎಂಬುವವರ ಬೈಕ್‍ ಗೆ ಡಿಕ್ಕಿಪಡಿಸಿದ ಪರಿಣಾಮ ರಸ್ತೆಗೆ ಬಿದ್ದು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಗೋಣಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಅಕ್ರಮ ಮದ್ಯ ಮಾರಾಟ ಪ್ರಕರಣ

ದಿನಾಂಕ:13-12-2020 ರಂದು ಸೋಮವಾರಪೇಟೆ ತಾಲ್ಲೂಕು ಐಗೂರು  ಗ್ರಾಮದ  ನಿವಾಸಿ ವಿನೋದ್‍ ಕುಮಾರ್ ಎಂಬುವವರು  ಅವರ ವಾಸದ ಮನೆಯ ಬಳಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯ ಇಟ್ಟುಕೊಂಡುಸಾರ್ವಜನಿಕರಿಗೆ ಮದ್ಯ ಸೇವನೆಗೆ ಅವಕಾಶ ಮಾಡುತ್ತಿದ್ದ ಪ್ರಕರಣವನ್ನು ಸೋಮವಾರಪೇಟೆ  ಠಾಣೆ ಪಿಎಸ್‍ಐ ಶ್ರೀಧರ್ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಿದ್ದಾರೆ.

ಅಕ್ರಮ ಮದ್ಯ ಮಾರಾಟ ಪ್ರಕರಣ

ದಿನಾಂಕ:13-12-2020 ರಂದು ಸೋಮವಾರಪೇಟೆ ತಾಲ್ಲೂಕು ಹಿತ್ತಲಗೇರಿ  ಗ್ರಾಮದ  ನಿವಾಸಿ ಗಂಗಾಧರ ಎಂಬುವವರು  ಅವರ ವಾಸದ ಮನೆಯ ಬಳಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯ ಇಟ್ಟುಕೊಂಡುಸಾರ್ವಜನಿಕರಿಗೆ ಮದ್ಯ ಸೇವನೆಗೆ ಅವಕಾಶ ಮಾಡುತ್ತಿದ್ದ ಪ್ರಕರಣವನ್ನು ಶನಿವಾರಸಂತೆ  ಠಾಣೆ ಪಿಎಸ್‍ಐ ದೇವರಾಜ್ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಿದ್ದಾರೆ.