Crime News

ಕಳವು ಪ್ರಕರಣ

ದಿನಾಂಕ: 16-12-2020 ರಂದು ವಿರಾಜಪೇಟೆ ತಾಲ್ಲೂಕು ಹುಂಡಿ, ಬಾಡಗ ಬಾಣಂಗಾಲ ಗ್ರಾಮದ ನಿವಾಸಿ ಶೇಖ್ ಅಹಮ್ಮದ್ ರವರ ಕೊಟ್ಟಿಗೆಯಲ್ಲಿ ಕಟ್ಟಿಹಾಕಿದ್ದ 49,000 ರೂ ಬೆಲೆಬಾಳುವ 5 ಕುರಿಗಳನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಸಿದ್ದಾಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ ಪ್ರಕರಣ

ದಿನಾಂಕ: 16-12-2020 ರಂದು ವಿರಾಜಪೇಟೆ ಪಟ್ಟಣದ ಬದ್ರಿಯಾ ಜಂಕ್ಷನ್‍ ಬಳಿ ಕೆಎ-12-ಎನ್-5875 ರ ಕಾರನ್ನು ಅದರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ರಾಜು ಎಂಬುವವರಿಗೆ ಡಿಕ್ಕಿಪಡಿಸಿದ ಪರಿಣಾಮ ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಅಕ್ರಮ ಮದ್ಯ ಮಾರಾಟ ಪ್ರಕರಣ

ದಿನಾಂಕ: 16-12-2020 ರಂದು ಸೋಮವಾರಪೇಟೆ ತಾಲ್ಲೂಕು ಸುಂದರನಗರ  ಗ್ರಾಮದ  ನಿವಾಸಿ ಮಹಿಳೆಯೊಬ್ಬರು ಅವರ ಅಂಗಡಿಯಲ್ಲಿ ಅಕ್ರಮವಾಗಿ  ಮದ್ಯವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಕುಶಾಲನಗರ ಗ್ರಾಮಾತರ ಠಾಣೆ ಪಿಎಸ್‍ಐ ಶಿವಶಂಕರ್ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಿದ್ದಾರೆ.