Crime News

ರಸ್ತೆ ಅಪಘಾತ ಪ್ರಕರಣ

ದಿನಾಂಕ: 29-12-2020 ರಂದು ಸೋಮವಾರಪೇಟೆ ತಾಲ್ಲೂಕು ಹೆಬ್ಬಾಲೆ ಗ್ರಾಮದ ಬಳಿ ಮುಖ್ಯ ರಸ್ತೆಯಲ್ಲಿ ಟಿಎನ್‍-07-ಸಿಕ್ಯೂ-0108 ರ ಕಾರನ್ನು ಅದರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಕೆಎ-12-ಎಸ್-4019 ರ  ದ್ವಿಚಕ್ರ ವಾಹನಕ್ಕೆ ಡಿಕ್ಕಿಪಡಿಸಿದ ಪರಿಣಾಮ ಹಿಂಬದಿ ಸವಾರ ಬಿದ್ದು ಗಾಯಗೊಂಡಿದ್ದು , ಚಾಲಕ ಕಾರನ್ನು ನಿಲ್ಲಿಸದೇ ಹೋಗಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಕುಶಾಲನಗರ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ ಪ್ರಕರಣ

ದಿನಾಂಕ: 30-12-2020 ರಂದು ಸೋಮವಾರಪೇಟೆ ತಾಲ್ಲೂಕು ಹೆಗ್ಗಡಹಳ್ಳಿ ಗ್ರಾಮದ ಬಳಿ ಮುಖ್ಯ ರಸ್ತೆಯಲ್ಲಿ ಕೆಎ-09-ಎನ್‍-6724 ರ ಕಾರನ್ನು ಅದರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಆರೋಷ್‍ ಎಂಬುವವರಿಗೆ ಡಿಕ್ಕಿಪಡಿಸಿದ ಪರಿಣಾಮ ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಅಕ್ರಮ ಮದ್ಯ ಮಾರಾಟ ಪ್ರಕರಣ

ದಿನಾಂಕ:30-12-2020 ರಂದು ಸೋಮವಾರಪೇಟೆ ತಾಲ್ಲೂಕು ಕೂಡಿಗೆ  ಗ್ರಾಮದ  ಕೈಗಾರಿಕ ಪ್ರದೇಶದ ಬಳಿ  ದಿವಾಕರ ಎಂಬುವವರು  ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯ ಇಟ್ಟುಕೊಂಡುಸಾರ್ವಜನಿಕರಿಗೆ ಮದ್ಯ ಸೇವನೆಗೆ ಅವಕಾಶ ಮಾಡುತ್ತಿದ್ದ ಪ್ರಕರಣವನ್ನು ಕುಶಾಲನಗರ ಗ್ರಾಮಾಂತರ ಠಾಣೆ ಪಿಎಸ್‍ಐ ಶಿವಶಂಕರ್ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಿದ್ದಾರೆ.