Crime News

ರಸ್ತೆ ಅಪಘಾತ ಪ್ರಕರಣ

ದಿನಾಂಕ: 03.01.2021 ರಂದು ಮಡಿಕೇರಿ ತಾಲ್ಲೂಕು ಮದೆನಾಡು ಗ್ರಾಮದ ಅಬ್ಬಿಕೊಲ್ಲಿ ಬಳಿ ಹೆದ್ದಾರಿ ರಸ್ತೆಯಲ್ಲಿ ಕೆಎ-19-ಎಂಬಿ-256 ರ ಕಾರನ್ನು ಅದರ ಚಾಲಕ ಸಿದ್ದಲಿಂಗೇಶ ಎಂಬುವವರು ಅತಿವೇಗ ಮತ್ತುಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಕೆಎ-51-ಬಿ-0203 ರ ಕಾರಿಗೆ  ಡಿಕ್ಕಿಪಡಿಸಿದ ಪರಿಣಾಮ ಕಾರುಗಳು ಜಖಂಗೊಂಡು ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ,ಮಹಿಳೆ ಸಾವು

ದಿನಾಂಕ: 03.01.2021 ರಂದು ವಿರಾಜಪೇಟೆ ತಾಲ್ಲೂಕು ಅರಪಟ್ಟು ಗ್ರಾಮದ ಬಳಿ ರಸ್ತೆಯಲ್ಲಿ ಕೆಎ-51-ಎನ್-2705 ರ ಜೀಪನ್ನು ಅದರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿದ ಪರಿಣಾಮ ಜೀಪು ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗೆ ಬಿದ್ದುದರಿಂದ ಜೀಪಿನಲ್ಲಿದ್ದ ಪ್ರಯಾಣಿಕರು ಗಾಯಗೊಂಡಿದ್ದು ಓರ್ವ ಮಹಿಳೆ ಸಾವನಪ್ಪಿದ್ದು ಈ ಬಗ್ಗೆ ಅಬ್ದುಲ್‍ ಕರೀಂ ಎಂಬುವವರು ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ ಪ್ರಕರಣ

ದಿನಾಂಕ: 03.01.2021 ರಂದು ರಾತ್ರಿ ಪೊನ್ನಂಪೇಟೆ ತಾಲ್ಲೂಕು ಅರವತ್ತೊಕ್ಲು ಗ್ರಾಮದ ಬಳಿ ಮುಖ್ಯ ರಸ್ತೆಯಲ್ಲಿ ಕೆಎ-09-ಎಂ-2627 ರ ಕಾರನ್ನು ಚಾಲಕ \ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಆಟೋ ಮತ್ತು ಬೈಕ್‍ ಗೆ ಡಿಕ್ಕಿಪಡಿಸಿದ ಪರಿಣಾಮ ಬೈಕ್ ಸವಾರ ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಗೋಣಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಅಕ್ರಮ ಜೂಜಾಟ ಪ್ರಕರಣ

ದಿನಾಂಕ: 3-01-2021 ರಂದು ಸೋಮವಾರಪೇಟೆ ತಾಲ್ಲೂಕು ಬಸವನಹಳ‍್ಳಿ ಗ್ರಾಮದ  ನ್ಯೂ ಸ್ಟಾರ್‍ ಹೊಟೇಲ್ ಪಕ್ಕದ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಇಸ್ಪೀಟ್‍ ಜೂಜಾಟವಾಡುತ್ತಿದ್ದ ಪ್ರರಕಣವನ್ನು ಕುಶಾಲನಗರ ಗ್ರಾಮಾಂತರ ಠಾಣೆ ಪಿಎಸ್‍ಐ ಶಿವಶಂಕರ್‍ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಜೂಜಾಟಕ್ಕೆ ಉಪಯೋಗಿಸಿದ ನಗದು ಹಣ, ಇಸ್ಪೀಟ್‍ ಕಾರ್ಡ್‍ ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.