Crime News

ಕಾರು ಕಳವು ಪ್ರಕರಣ

ದಿನಾಂಕ: 04.01.2021 ರಂದು ರಾತ್ರಿ ಸೋಮವಾರಪೇಟೆ ತಾಲ್ಲೂಕು ಕೊಡ್ಲಿಪೇಟೆ ಗ್ರಾಮದ ನಿವಾಸಿ ರಹಮತ್‍ ಎಂಬುವವರ ಮನೆಯ ಮುಂದೆ ನಿಲ್ಲಿಸಿದ್ದ ₹. 40,000 ಮೌಲ್ಯದ ಮಾರುತಿ 800 ಕಾರನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಶನಿವಾರಸಂತೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ ಪ್ರಕರಣ

ದಿನಾಂಕ: 05-01-2021 ರಂದು ಸೋಮವಾರಪೇಟೆ ತಾಲ್ಲೂಕು ನೆಲ್ಯಹುದಿಕೇರಿ ಗ್ರಾಮದ ಬಳಿ ಮುಖ‍್ಯ ರಸ್ತೆಯಲ್ಲಿ ಕೆಎ-09-ಪಿ7844 ರ ಕಾರನ್ನು ಅದರ ಚಾಲಕ ರದೀಶ್‍ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಕೆಎ-12-ಬಿ-0589 ರ ಆಟೋ ರಿಕ್ಷಾಕ್ಕೆ ಡಿಕ್ಕಿಪಡಿಸಿದ ಪರಿಣಾಮ ರಿಕ್ಷಾ ಚಾಲಕ ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಸಿದ್ದಾಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.