Crime News

ರಸ್ತೆ ಅಪಘಾತ ಪ್ರಕರಣ

ದಿನಾಂಕ: 06-01-2021 ರಂದು ಸೋಮವಾರಪೇಟೆ ತಾಲ್ಲೂಕು ನಂಜರಾಯಪಟ್ಟಣ ಗ್ರಾಮದ ಬಳಿಮುಖ್ಯ ರಸ್ತೆಯಲ್ಲಿ ಕೆಎ-12-ಆರ್‍-6132 ರ ಸ್ಕೂಟರನ್ನು ಅದರ ಸವಾತ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಸಮೀರ್‍ ಎಂಬುವವರು ಚಾಲನೆ ಮಾಡುತ್ತಿದ್ದ ಬೈಕ್‍ ಗೆ ಡಿಕ್ಕಿಪಡಿಸಿದ ಪರಿಣಾಮ ಸವಾರರು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ದೂರಿನ ಮೇರೆ ಕುಶಾಲನಗರ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಸಿ ತನಿಖೆ ಕೈಗೊಂಡಿದ್ದಾರೆ.

ಹಲ್ಲೆ ಪ್ರಕರಣ

ದಿನಾಂಕ:05-01-2021 ರಂದು ಮಡಿಕೇರಿ ತಾಲ್ಲೂಕು ನೆಲಜಿ ಗ್ರಾಮದ ನಿವಾಸಿ ಮಣಿ ಎಂಬುವವರಿಗೆ ಅವರ ಪಕ್ಕದ ಮನೆಯ ನಿವಾಸಿ ಮಾಣಿಕ್ಯ ಎಂಬುವವರು ವೈಯಕ್ತಿಕ ವೈಷಮ್ಯದಿಂದ ಕತ್ತಿಯಿಂದ ಹಲ್ಲೆ ಮಾಡಿ ಗಾಯಪಡಿಸಿದ್ದು ಈ ಬಗ್ಗೆ ಮಣಿ ರವರು ನೀಡಿದ ದೂರಿನ ಮೇರೆ ನಾಪೋಕ್ಲು ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.