Crime News
ಹಲ್ಲೆ ಪ್ರಕರಣ
ದಿನಾಂಕ: 07-01-2021 ರಂದು ಪೊನ್ನಂಪೇಟೆ ತಾಲ್ಲೂಕು ನೊಕ್ಯ ಗ್ರಾಮದ ನಿವಾಸಿ ಎಂ.ಸಿ ಬೆಳ್ಯಪ್ಪ ಮತ್ತು ಇತರರುಹಾಗೂ ಎಂ..ಸಿ ದೇವಯ್ಯ ಮತ್ತು ಇತರರು ತೋಟದಲ್ಲಿ ಕಾಫಿ ಕುಯ್ಲು ವಿಚಾರದಲ್ಲಿ ಪರಸ್ಪರ ಹಲ್ಲೆ ಮಾಡಿಕೊಂಡು ಕೊಲೆ ಬೆದರಿಕೆ ಹಾಕಿದ್ದು ಈ ಬಗ್ಗೆ ಉಭಯ ಕಡೆಯವರು ನೀಡಿದ ಪುಕಾರಿನ ಮೇರೆ ಗೋಣಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
ಹಲ್ಲೆ ಪ್ರಕರಣ
ದಿನಾಂಕ: 06-01-2020 ರಂದು ವಿರಾಜಪೇಟೆ ತಾಲ್ಲೂಕು ಕುಟ್ಟಂದಿ ಗ್ರಾಮದ ನಿವಾಸಿ ಅಣ್ಣು ಮತ್ತು ಆವರ ಪತ್ನಿಯವರಿಗೆ ಅದೇ ಗ್ರಾಮದ ನಿವಾಸಿಗಳಾದ ಅರುಣ, ರೋಷನ್, ಚಾಮಿ, ಚೋಮ ಎಂಬುವವರು ಕ್ಷುಲ್ಲಕ ಕಾರಣಕ್ಕೆ ರಾಡಿನಿಂದ ಹಲ್ಲೆ ಮಾಡಿ ಗಾಯಪಡಿಸಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
ರಸ್ತೆ ಅಪಘಾತ ಪ್ರಕರಣ
ದಿನಾಂಕ: 07-01-2020 ರಂದು ಪೊನ್ನಂಪೇಟೆ ತಾಲ್ಲೂಖು ಜೋಡುಬೀಟಿ ಗ್ರಾಮದ ಬಳಿ ಕೆಎಲ್-59-ಹೆಚ್-9566 ರ ಬೈಕನ್ನು ಅದರ ಸವಾರ ಲ್ಯಾನ್ಸಿ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಮಹೇಶ್ ಎಂಬುವವರಿಗೆ ಡಿಕ್ಕಿಪಡಿಸಿದ ಪರಿಣಾಮ ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಪೊನ್ನಂಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
ಅಕ್ರಮ ಮದ್ಯ ಮಾರಾಟ ಪ್ರಕರಣ
ದಿನಾಂಕ: 07-01-2021 ರಂದು ಸೋಮವಾರಪೇಟೆ ತಾಲ್ಲೂಕು ಅಂಕನಹಳ್ಳಿ ಗ್ರಾಮದ ಡೈರಿ ಬಳಿ ಅಕ್ರಮವಾಗಿ ಮದ್ಯವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಶನಿವಾರಸಂತೆ ಠಾಣೆ ಪಿಎಸ್ಐ ದೇವರಾಜ್ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ರಮೇಶ್ ಎಂಬುವವರ ವಿರುದ್ದ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಿದ್ದಾರೆ.