Crime News

ಅಕ್ರಮ ಲಾಟರಿ ಮಾರಾಟ ಪ್ರಕರಣ

ದಿನಾಂಕ: 09-01-2021 ರಂದು ಪೊನ್ನಂಪೇಟೆ ತಾಲ್ಲೂಕು ಗೋಣಿಕೊಪ್ಪ ಗ್ರಾಮದಲ್ಲಿ ಅಕ್ರಮವಾಗಿ ಸಾರ್ವಜನಿಕರಿಗೆ ಕೇರಳ ರಾಜ್ಯದ ಲಾಟರಿ ಟಿಕೆಟ್‍ಗಳನ್ನು ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಗೋಣಿಕೊಪ್ಪ ಠಾಣೆ ಪಿ.ಎಸ್‍.ಐ ಆರ್. ಮಂಚಯ್ಯ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಅಯ್ಯಪ್ಪ  ಎಂಬುವವರ ವಿರುದ್ದ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಅಕ್ರಮ ಜೂಜಾಟ ಪ್ರಕರಣ 

ದಿನಾಂಕ: 09-01-2021 ರಂದು ಪೊನ್ನಂಪೇಟೆ ತಾಲ್ಲೂಕು ಬೆಮ್ಮತ್ತಿ ಧನುಗಾಲ ಗ್ರಾಮದ ಉಮ್ಮರ್‍ ಮತ್ತು ಇತರರು ಮೊಬೈಲ್‍ ಪೋನಿನಲ್ಲಿ ಕೇರಳ ರಾಜ್ಯದ ಲಾಟರಿ ಫಲಿತಾಂಶ ಆದರಿಸಿ ಸಂಖ‍್ಯೆಗಳ ಮೇಲೆ ಹಣವನ್ನು ಪಣವಾಗಿರಿಸಿಕೊಂಡು ಅಕ್ರಮವಾಗಿ ಜೂಜಾಟವಾಡುತ್ತಿದ್ದ ಪ್ರಕರಣವನ್ನು ಗೋಣಿಕೊಪ್ಪ ಠಾಣೆ ಪಿಎಸ್‍ಐ ಸುಬ್ಬಯ್ಯ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.

ಅಕ್ರಮ ಲಾಟರಿ ಮಾರಾಟ ಪ್ರಕರಣ

ದಿನಾಂಕ: 09-01-2021 ರಂದು ವಿರಾಜಪೇಟೆ ಪಟ್ಟಣದ ಮಟನ್‍ ಮಾರ್ಕೆಟ್‍ ಬಳಿ ಅಕ್ರಮವಾಗಿ ಸಾರ್ವಜನಿಕರಿಗೆ ಕೇರಳ ರಾಜ್ಯದ ಲಾಟರಿ ಟಿಕೆಟ್‍ಗಳನ್ನು ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ವಿರಾಜಪೇಟೆ ಪಟ್ಟಣ ಠಾಣೆ ಪಿ.ಎಸ್‍.ಐ ಹೆಚ್‍.ಎಸ್‍ ಬೋಜಪ್ಪ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪೆರಂಬಾಡಿ ಗ್ರಾಮದ ನಿವಾಸಿ ಲತೀಫ್‍  ಎಂಬುವವರ ವಿರುದ್ದ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಕಳವು ಪ್ರಕರಣ

ದಿನಾಂಕ: 06-01-2021 ರಿಂದ 08-01-2021 ರ ನಡುವಿನ ದಿನಗಳಲ್ಲಿ ಕುಶಾಲನಗರ ಪಟ್ಟಣದ ಬಸವೇಶ್ವರ ಬಡಾವಣೆ ನಿವಾಸಿ ನಾಗರಾಜು ಎಂಬುವವರ ಮನೆಯ ಬೀಗವನ್ನು ಯಾರೋ ಕಳ್ಳರು ಮುರಿದು ಒಳನುಗ್ಗಿ  ಬೀರುವಿನಲ್ಲಿಟ್ಟಿದ್ದ ₹. 20000 ನಗದು ಸಹಿತ ₹. 40,000 ಬೆಲೆಬಾಳುವ ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಕುಶಾಲನಗರ ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ ಪ್ರಕರಣ

ದಿನಾಂಕ: 09-01-2021 ರಂದು ಸೋಮವಾರಪೇಟೆ ತಾಲ್ಲೂಕು ಆನೆಕಾಡು ಬಳಿ ಹೆದ್ದಾರಿ ರಸ್ತೆಯಲ್ಲಿ ಕೆಎ-12-0303 ರ ಲಾರಿಯನ್ನು ಅದರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಎದುರುಗಡೆಯಿಂದ ಬರುತ್ತಿದ್ದ ಕೆಎ-12-ಬಿ-3003 ರ ಟಿಪ್ಪರ್ ಲಾರಿಗೆ ಡಿಕ್ಕಿಪಡಿಸಿದ ಪರಿಣಾಮ ಲಾರಿಯಲ್ಲಿದ್ದ ಇಬ್ಬರು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಕುಶಾಲನಗರ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.