Crime News

ಹಲ್ಲೆ ಪ್ರಕರಣ

ದಿನಾಂಕ: 10-01-2021 ರಂದು ಸೋಮವಾರಪೇಟೆ ತಾಲ್ಲೂಕು ಈರಳವಳಮುಡಿ ಗ್ರಾಮದ ನಿವಾಸಿಗಳಾದ ಅಬ್ದುಲ್‍ ಅಜೀಜ್‍, ಮತ್ತು  ಕುಟ್ಟಿ ಹಸನ್ , ತಬ್ಸೀರ್, ರಫೀಕ್‍ ಎಂಬುವವರು ತೋಟದಲ್ಲಿ ಕಾಫಿ ಕುಯ್ಲು ವಿಚಾರದಲ್ಲಿ ಪರಸ್ಪರ ಜಗಳ ಮಾಡಿಕೊಂಡು ಹಲ್ಲೆ ಮಾಡು ಕೊಲೆ ಬೆದರಿಕೆ ಹಾಕಿದ್ದು ಈ ಬಗ್ಗೆ ಉಭಯ ಕಡೆಯವರು ನೀಡಿದ ಪುಕಾರಿನ ಮೇರೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪ‍ಘಾತ ಪ್ರಕರಣ

ದಿನಾಂಕ: 10.01.2021 ರಂದು ಮಡಿಕೇರಿ ತಾಲ್ಲೂಕು ಅಪ್ಪಂಗಳ ಗ್ರಾಮದ ಬಳಿ ಕೆಎ-12-8511 ರ ಸ್ಕೂಟರ್‍ ಗೆ ಟಿಪ್ಪರ್‍ ಲಾರಿಯನ್ನು ಅದರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಹಿಂಬದಿಯಿಂದ ಸ್ಕೂಟರ್‍ಗೆ ಡಿಕ್ಕಿಪಡಿಸಿದ ಪರಿಣಾಮ ಸವಾರನ ಕಾಲಿಗೆ ಗಾಯವಾಗಿದ್ದು ಲಾರಿಯನ್ನು ಚಾಲಕ ನಿಲ್ಲಿಸದೇ ಹೋಗಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ ಪ್ರಕರಣ

ದಿನಾಂಕ: 10.01.2021 ರಂದು ಸೋಮವಾರಪೇಟೆ ತಾಲ್ಲೂಕು ಕುಶಾಲನಗರ ಸಿದ್ದಾಪುರ ಮುಖ‍್ಯ ರಸ್ತೆಯ ದೇವರಕಾಡು ಬಳಿ ಕೆಎ-12-ಎನ್-1548 ರ ಕಾರನ್ನು ಚಾಲಕ ಮುರುಗನ್‍ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಎದುರುಗಡೆಯಿಂದ ಬರುತ್ತಿದ್ದ ಕೆಎ-21-ಯು-2106 ರ ಸ್ಕೂಟರ್‍ಗೆ ಡಿಕ್ಕಿಪಡಿಸಿದ ಪರಿಣಾಮ ಸವಾಋ ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಮನೆ ಕಳ್ಳತನಕ್ಕೆ ಯತ್ನ,

ದಿನಾಂಕ: 10.01.2021 ರಂದು ಸೋಮವಾರಪೇಟೆ ತಾಲ್ಲೂಕು ಚಿಕ್ಕಅಳುವಾರ ಗ್ರಾಮದ ನಿವಾಸಿ ಲೋಕೇಶ್‍ ಎಂಬುವವರ ಮನೆಯೊಳಗೆ ಅದೇ ಗ್ರಾಮದ ನಿವಾಸಿ ಶೇಷಾದ್ರಿ ಎಂಬುವವರು ನುಗ್ಗಿ ಕಳ್ಳತನಕ್ಕೆ ಯತ್ನಿಸಿದ್ದು ಈ ಬಗ್ಗ ನೀಡಿದ ಪುಕಾರಿನ ಮೇರೆ ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.