Crime News
ಕಳವು ಪ್ರಕರಣ
ದಿನಾಂಕ: 30-12-2020 ರಂದು ಮಡಿಕೇರಿ ನಗರದ ಆಜಾದ್ ನಗರ ನಿವಾಸಿ ಖುರೈಸ್ ಎಂಬುವವರು ಒಂಕಾರೇಶ್ವರ ದೇವಾಲಯ ರಸ್ತೆಯಲ್ಲಿಅವರ ಅಂಗಡಿಯ ಬಳಿ ನಿಲ್ಲಿಸಿದ್ದ ₹. 45,000 ಮೌಲ್ಯದ ಕೆಎ-01-ಎಂಎ-4675 ನೋಂದಣಿ ಸಂಖ್ಯೆ ಕಾರನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ದಿನಾಂಕ: 12.01.2021 ರಂದು ನೀಡಿದ ಪುಕಾರಿನ ಮೇರೆ ಮಡಿಕೇರಿ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
ರಸ್ತೆ ಅಪಘಾತ ಪ್ರಕರಣ
ದಿನಾಂಕ: 12.01.2021 ರಂದು ಮಡಿಕೇರಿ ತಾಲ್ಲೂಕು ಬೆಟ್ಟಗೇರಿ ಗ್ರಾಮದ ಬಳಿ ಮುಖ್ಯ ರಸ್ತೆಯಲ್ಲಿ ಕೆಎ-03-ಪಿ-8879 ನೋಂದಣಿ ಸಂಖ್ಯೆಯ ಕಾರನ್ನು ಅದರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಸತೀಶ್ ಕುಮಾರ್ ಎಂಬುವವರು ಚಾಲನೆ ಮಾಡುತ್ತಿದ್ದ ಕಾರಿಗೆ ಡಿಕ್ಕಿಪಡಿಸಿದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
ಆನ್ ಲೈನ್ ವಂಚನೆ ಪ್ರಕರಣ
ದಿನಾಂಕ: 04-01-2021 ರಂದು ಪೊನ್ನಂಪೇಟೆ ತಾಲ್ಲೂಕು ಬಿಲ್ಲೂರು ಗ್ರಾಮದ ನಿವಾಸಿ ಮಹಿಳೆಯೊಬ್ಬರ ಬ್ಯಾಂಕ್ ಖಾತೆಯಿಂದ ಅವರ ಅರಿವಿಗೆ ಬಾರದಂತೆ ಯಾರೋ ಅಪರಿಚಿತರು ಹಂತ ಹಂತವಾಗಿ ಒಟ್ಟು ₹. 24,080 ಗಳನ್ನು ಡ್ರಾ ಮಾಡಿ ವಂಚನೆ ಮಾಡಿದ್ದು ಈ ಬಗ್ಗೆ ದಿನಾಂಕ: 12.01.2021 ರಂದು ನೀಡಿದ ಪುಕಾರಿನ ಮೇರೆ ಕೊಡಗು ಸೈಬರ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.