Crime News

ರಸ್ತೆ ಅಪಘಾತ ಪ್ರಕರಣ

ದಿನಾಂಕ: 14-01-2021 ರಂದು ಮಡಿಕೇರಿ ತಾಲ್ಲೂಕು ಇಬ್ನಿವಳವಾಡಿ ಗ್ರಾಮದ ಬಳಿ ಹೆದ್ದಾರಿ ರಸ್ತೆಯಲ್ಲಿ ಕೆಎ-12-ಎಂಬಿ-5716 ನೋಂದಣಿ ಸಂಖ್ಯೆಯ ಕಾರನ್ನು ಚಾಲಕ ಕಾರ್ತಿಕ್‍ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಎದುರುಗಡೆಯಿಂದ ಬರುತ್ತಿದ್ದ ಲಾರಿಗೆ ಡಿಕ್ಕಿಪಡಿಸಿದ ಪರಿಣಾಮ ಚಾಲಕ ಕಾರಿನಲ್ಲಿದ್ದ ಸಹಪ್ರಯಾಣಿಕ ಜಿತಿನ್‍ ಎಂಬುವವರು ಗಾಯಗೊಂಡಿದ್ದು ಈ ಬಗ್ಗೆ ಲಾರಿ ಚಾಲಕ ವಿಶ್ವನಾಥ್‍ ಎಂಬುವವರು ನೀಡಿದ ಪುಕಾರಿನ ಮೇರೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ ಪ್ರಕರಣ

ದಿನಾಂಕ: 13-01-2021ರಂದು ಸೋಮವಾರಪೇಟೆ ತಾಲ್ಲೂಕು ಆಲೂರು ಸಿದ್ದಾಪುರ ಗ್ರಾಮದ ಬಳಿ ಮುಖ್ಯ ರಸ್ತೆಯಲ್ಲಿ ಗಣಗೂರು ಗ್ರಾಮದ ನಿವಾಸಿ ದಿನೇಶ ಎಂಬುವವರು ಬೈಕನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಕೆಎ-12-ಯು-2296 ರ ಸ್ಕೂಟರ್‍ ನ ಹಿಂಬದಿಗೆ ಡಿಕ್ಕಿಪಡಿಸಿದ ಪರಿಣಾಮ ಸ್ಕೂಟರ್‍ ಸವಾರ ಮತ್ತು ಹಿಂಬದಿ ಸವಾರರು ಗಾಯಗೊಂಡಿದ್ದರು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಶನಿವಾರಸಂತೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಹಲ್ಲೆ ಪ್ರಕರಣ

ದಿನಾಂಕ: 14-01-2021 ರಂದು ಸೋಮವಾರಪೇಟೆ ತಾಲ್ಲೂಕು ಅಗಳಿ ಗ್ರಾಮದ ನಿವಾಸಿ ಮುತ್ತಯ್ಯ ಎಂಬುವವರು ವೈಯಕ್ತಿಕ ವೈಷಮ್ಯದಿಂದ ಅದೇ ಗ್ರಾಮದ ನಿವಾಸಿ ಮಹಿಳೆಯೊಬ್ಬರಿಗೆ ಕಲ್ಲಿನಿಂದ ಹಲ್ಲೆ ಮಾಡಿ, ಹಲ್ಲಿನಿಂದ ಕಚ್ಚಿ ಗಾಯಗೊಳಿಸಿ  ಕೋವಿಯನ್ನು ತೋರಿಸಿ ಕೊಲೆ ಬೆದರಿಕೆ ಹಾಕಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಶನಿವಾರಸಂತೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಕೆರೆಗೆ ಕಾರು ಬಿದ್ದು ತಾಯಿ ಮಗಳು ಧಾರುಣ ಸಾವು.

ಚಾಲಕನ ಅತಿವೇಗದ ಚಾಲನೆಯಿಂದ ನಿಯಂತ್ರಣ ತಪ್ಪಿದ ಕಾರೊಂದು ಕೆರೆಗೆ ಬಿದ್ದು ಮುಳುಗಿದ ಪರಿಣಾಮ ತಾಯಿ ಮತ್ತು ಮಗಳು ಧಾರುಣ ಸಾವನಪ್ಪಿದ ಘಟನೆ ಸುಂಟಿಕೊಪ್ಪ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ದಿನಾಂಕ: 14-01-2021 ರಂದು ಕುಶಾಲನಗರ ನಿವಾಸಿ ವೆಂಕಟೇಶ್‍ ಎಂಬುವವರು ಅವರ ಪತ್ನಿ ಮತ್ತು ಮಗಳೊಂದಿಗೆ ಕೆಎ-12-ಪಿ-1102 ರ ನೋಂದಣಿ ಸಂಖ್ಯೆಯ ಕಾರಿನಲ್ಲಿ ಕುಶಾಲನಗರಕ್ಕೆ ಹೋಗುತ್ತಿರುವಾಗ ಕೆದಕಲ್‍ ಗ್ರಾಮದ ಬಾಳೆಕಾಡು ಎಸ್ಟೇಟ್‍ ಬಳಿ ಹೆದ್ದಾರಿ ರಸ್ತೆಯಲ್ಲಿ ಕಾರನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿದ ಪರಿಣಾಮ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಕೆರೆಗೆ ಬಿದ್ದು ನೀರಿನಲ್ಲಿ ಮುಳುಗಿದ ಪರಿಣಾಮ ಚಾಲಕ ವೆಂಕಟೇಶ್‍ ನೀರಿನಲ್ಲಿ ಈಜಿ ಮೇಲೆ ಬಂದು ಪಾರಾಗಿರುತ್ತಾರೆ. ಕಾರಿನಲ್ಲಿದ್ದ ಪತ್ನಿ ಮತ್ತು ಮಗಳು ನೀರಿನಲ್ಲಿ ಮುಳುಗಿ ಸಾವನಪ್ಪಿರುತ್ತಾರೆ. ಈ ಬಗ್ಗೆ ಪ್ರಸನ್ನಕುಮಾರ್ ಎಂಬುವವರು ನೀಡಿದ ದೂರಿನ ಮೇರೆ ಸುಂಟಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಮೈಸೂರು –ಬಂಟ್ವಾಳ ನಡುವಿನ ರಾಷ್ಟೀಯ ಹೆದ್ದಾರಿ 212 ರ  ಕುಶಾಲನಗರದಿಂದ ಸುಳ್ಯ ವರೆಗಿನ ರಸ್ತೆಯು ಕಡಿದಾದ ಬೆಟ್ಟಗುಡ್ಡ ಪ್ರದೇಶದಲ್ಲಿ ಹಾದುಹೋಗಿದ್ದು ಹೆಚ್ಚು ತಿರುವುಗಳಿಂದ ಕೂಡಿದ್ದು ವಾಹನಗಳನ್ನು ಅಜಾಗರೂಕತೆಯಿಂದ ಅತಿವೇಗವಾಗಿ ಚಾಲನೆ ಮಾಡುವುದು ಅಪಾಯಕಾರಿಯಾಗಿರುತ್ತದೆ. ದಯವಿಟ್ಟು ವಾಹನ ಚಾಲಕರು , ದ್ವಿಚಕ್ರ ವಾಹನ ಸವಾರರು ವಾಹನಗಳ ನಡುವೆ ನಿಗದಿತ ಅಂತರ ಕಾಯ್ದುಕೊಂಡು ನಿಗದಿತ ವೇಗದ ಮಿತಿಯೊಂದಿಗೆ ರಸ್ತೆ ಸಂಚಾರ ನಿಯಮಗಳನ್ನು ಪಾಲನೆ ಮಾಡಿಕೊಂಡು ಜಾಗರೂಕತೆಯಿಂದ ವಾಹನಗಳನ್ನು ಚಾಲನೆ ಮಾಡಲು ಕೊಡಗು ಜಿಲ್ಲಾ ಪೊಲೀಸ್ ವಿನಂತಿಸಿದೆ.