Crime News

ಹಲ್ಲೆ ಪ್ರಕರಣ

ದಿನಾಂಕ: 14-01-2021 ರಂದು ಸೋಮವಾರಪೇಟೆ ತಾಲ್ಲೂಕು ಕುಮಾರಳ್ಳಿ ಬಾಚಳ್ಳಿ ಗ್ರಾಮದ ನಿವಾಸಿ ಪುಷ್ಪಲತ ಎಂಬುವವರಿಗೆ ಅದೇ ಗ್ರಾಮದ ನಿವಾಸಿಗಳಾದ ಹೇಮಲತ, ಅಭಿತು, ಅಶ್ವತ್‍, ಬೋಜ ಎಂಬುವವರು ಕ್ಷುಲ್ಲಕ ಕಾರಣಕ್ಕೆ ಕಲ್ಲಿನಿಂದ ಹಲ್ಲೆ ಮಾಡಿ ಗಾಯಪಡಿಸಿದ್ದು ಈ ಬಗ್ಗೆ ನೀಡಿದ ದೂರಿನ ಮೇರೆ ಸೋಮವಾರಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಅಕ್ರಮ ಜೂಜಾಟ ಪ್ರಕರಣ

ದಿನಾಂಕ: 15-01-2021 ರಂದು ಸೋಮವಾರಪೇಟೆ ತಾಲ್ಲೂಕು ಕೂಡುಮಂಗಳೂರು  ಗ್ರಾಮದ  ಕೈಗಾರಿಕಾ ಪ್ರದೇಶದ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಇಸ್ಪೀಟ್‍ ಜೂಜಾಟವಾಡುತ್ತಿದ್ದ ಪ್ರಕರಣವನ್ನು ಕುಶಾಲನಗರ ಗ್ರಾಮಾಂತರ ಠಾಣೆ ಪಿಎಸ್‍ಐ ಶಿವಶಂಕರ್‍ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಜೂಜಾಟಕ್ಕೆ ಉಪಯೋಗಿಸಿದ ನಗದು ಹಣ, ವಾಹನ, ಇಸ್ಪೀಟ್‍ ಕಾರ್ಡ್‍ ವಶಕ್ಕೆ ಪಡೆದು 10 ಜನರ ವಿರುದ್ದ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.

 ರಸ್ತೆ ಅಪಘಾತ ಪ್ರಕರಣ

ದಿನಾಂಕ: 15-01-2021 ರಂದು ಗೋಣಿಕೊಪ್ಪ ಕೈಕೇರಿ ಗ್ರಾಮದ ಬಳಿಮುಖ‍್ಯ ರಸ್ತೆಯಲ್ಲಿ ಕೆಎ-55-ಆರ್‍-0176 ರ ಸ್ಕೂರನ್ನು ಅದರ ಸವಾರ ಅವಿನಾಶ್‍ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಎದುರುಗಡೆಯಿಂದ ಬರುತ್ತಿದ್ದ ಕೆಎ-1-ಎಂ-0152 ರ ಕಾರಿಗೆ ಡಿಕ್ಕಿಪಡಿಸಿದ ಪರಿಣಾಮ ಸ್ಕೂಟರ್‍ ಸವಾರ ಗಾಯಗೊಂಡಿದ್ದು ಈ ಬಗ್ಗೆ ನೀಡಿದ ದೂರಿನ ಮೇರೆ ಗೋಣಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ ಪ್ರಕರಣ

ದಿನಾಂಕ: 15-01-2021  ರಂದು ವಿರಾಜಪೇಟೆ ತಾಲ್ಲೂಕು ಕಡಂಗ ಗ್ರಾಮದ ಬಳಿ ಮುಖ್ಯ ರಸ್ತೆಯಲ್ಲಿ ಕೆಎ-12-ಜೆಡ್-8447 ಬರ ಕಾರನ್ನು ಚಾಲಕ ಗಣಪತಿ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಕೆಎ-03-ಹೆಚ್‍ಕ್ಯೂ-9548 ರ ಬೈಕ್‍ಗೆ ಡಿಕ್ಕಿಪಡಿಸಿದ ಪರಿಣಾಮ ಸವಾರ ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.