Crime News

ಕಳವು ಪ್ರಕರಣ

ದಿನಾಂಕ: 21-01-2021 ರಂದು ವಿರಾಜಪೇಟೆ ತಾಲ್ಲೂಕು ಕೊಳತ್ತೋಡು ಬೈಗೋಡು ಗ್ರಾಮದ ನಿವಾಸಿ ಪುಟ್ಟಸ್ವಾಮಿ ಎಂಬುವವರ ಕೆಎ-45-ಇಬಿ-9151 ನೋಂದಣಿ ಸಂಖ್ಯೆಯ ಬೈಕನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ದಿನಾಂಕ: 26-01-2021 ರಂದು ನೀಡಿದ ಪುಕಾರಿನ ಮೇರೆ ವಿರಾಜಪೇಟ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಹಲ್ಲೆ ಪ್ರಕರಣ

ದಿನಾಂಕ: 26-01-2021 ರಂದು ಪೊನ್ನಂಪೇಟೆ ತಾಲ್ಲೂಕು ಹುದೂರು ಗ್ರಾಮದಲ್ಲಿ ರಮೇಶ್‍ ಎಂಬುವವರಿಗೆ ಫೈಜಲ್ ಮತ್ತು ನಿಲ್ಷಾದ್‍ ಎಂಬುವವರು ಕ್ಷುಲ್ಲಕ ಕಾರಣಕ್ಕೆ ದೊಣ್ಣೆಯಿಂದ ಹಲ್ಲೆ  ಮಾಡಿ ಗಾಯಪಡಿಸಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಪೊನ್ನಂಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.