Crime News

ರಸ್ತೆ ಅಪಘಾತ ಪ್ರಕರಣ

ದಿನಾಂಕ: 28-01-2021 ರಂದು ಗೋಣಿಕೊಪ್ಪ ಬೈಪಾಸ್‍ ರಸ್ತೆಯಲ್ಲಿ ಕೆಎ-12-ಎಲ್-9879 ರ ಸ್ಕೂಟರನ್ನು ಅದರ ಸವಾರ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಕೆಎ-12-ಬಿ-6538 ರ ಗೂಡ್ಸ್ ವಾಹನಕ್ಕೆ ಡಿಕ್ಕಿಪಡಿಸಿದ ಪರಿಣಾಮ ಸ್ಕೂಟರ್ ಸವಾರ ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಗೋಣಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ ಪ್ರಕರಣ

ದಿನಾಂಕ: 27-01-2021 ರಂದು ವಿರಾಜಪೇಟೆ ತಾಲ್ಲೂಕು ಪೆರುಂಬಾಡಿ ಗ್ರಾಮದ ಬಳಿ ಮುಖ್ಯ ರಸ್ತೆಯಲ್ಲಿ ಕೆಎಎಲ-58-ವಿ-5104 ರ ಬೈಕನ್ನು ಅದರ ಸವಾರ ಉಮ್ಮರ್ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿದ ಪರಿಣಾಮ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದು ಗಾಯಗೊಂಡಿದ್ದು ಈ ಬಗ್ಗೆ ಹಸೈನ್‍ ಎಂಬುವವರು ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಅಕ್ರಮ ಮದ್ಯ ಮಾರಾಟ ಪ್ರಕರಣ

ದಿನಾಂಕ: 28-01-2021 ರಂದು ವಿರಾಜಪೇಟೆ ತಾಲ್ಲೂಕು ಬಿಳುಗುಂದ ಗ್ರಾಮದ ಕೊಮ್ಮೆತೋಡು ನಿವಾಸಿಗಳಾದ ಅಬ್ರಹಾಂ ನರೋನ ಮತ್ತು ಪ್ರವೀಣ್‍ ನರೋನ ಎಂಬುವವರು  ಅವರ ಮನೆಯಲ್ಲಿ ಅಕ್ರಮವಾಗಿ ಕಳ್ಳಭಟ್ಟಿ ತಯಾರಿಸುತ್ತಿದ್ದ ಪ್ರಕರಣವನ್ನು ವಿರಾಜಪೇಟೆ ಗ್ರಾಮಾಂತರ ಠಾಣೆ ಪಿಎಸ್‍ಐ ಸಿದ್ದಲಿಂದ ಬಾನಸೆ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ