Crime News

ರಸ್ತೆ ಅಪಘಾತ ಪ್ರಕರಣ

ದಿನಾಂಕ: 31-01-2021 ರಂದು ಗೋಣಿಕೊಪ್ಪ ಮೈಸೂರು ರಸ್ತೆಯ ಚೆನ್ನಂಗೊಲ್ಲಿ ಬಳಿ ಕೆಎ-03-ಎಎಫ್-0585 ರ ಕಾರನ್ನು ಅದರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಎದುರುಗಡೆಯಿಂದ ಬರುತ್ತಿದ್ದ ಕೆಎ-05-ಇಸಿ-1987 ರ ಬೈಕ್‍ಗೆ ಡಿಕ್ಕಿಪಡಿಸಿದ ಪರಿಣಾಮ ಬೈಕ್‍ ಸವಾರರು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ದೂರಿನ ಮೇರೆ ಗೋಣಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ ಪ್ರಕರಣ

ದಿನಾಂಕ: 31-01-2021 ರಂದು ಮಡಿಕೇರಿ –ಮೈಸೂರು ರಸ್ತೆಯ ಬಸವನಹಳ್ಳಿ ಬಳಿ ಕೆಎಲ್-60-ಜಿ-7023 ರ ಕಾರನ್ನು ಅದರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಕೆಎ-12-ಯು—4602 ರ ಬೈಕ್‍ ಗೆ ಡಿಕ್ಕಿಪಡಿಸಿದ ಪರಿಣಾಮ ಬೈಕ್ ಸವಾರ ದರ್ಶನ್‍ ಎಂಬುವವರು ರಸ್ತೆಗೆ ಬಿದ್ದು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ದೂರಿನ ಮೇರೆ ಕುಶಾಲನಗರ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಅಕ್ರಮ ಮದ್ಯ ಮಾರಾಟ ಪ್ರಕರಣ

ದಿನಾಂಕ: 31-01-2021 ರಂದು ಸೋಮವಾರಪೇಟೆ ತಾಲ್ಲೂಕು ಯಡೂರು  ಗ್ರಾಮದ  ನಿವಾಸಿ ಜಗದೀಶ್  ಎಂಬುವವರು ಅವರ ಅಂಗಡಿಯಲ್ಲಿ ಅಕ್ರಮವಾಗಿ  ಮದ್ಯವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಸೋಮವಾರಪೇಟೆ ಠಾಣೆ ಪಿಎಸ್‍ಐ ಶ್ರೀಧರ್ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಿದ್ದಾರೆ.