Crime News

ರಸ್ತೆ ಅಪಘಾತ ಪ್ರಕರಣ

ದಿನಾಂಕ: 01-02-2021 ರಂದು ವಿರಾಜಪೇಟೆ ತಾಲ್ಲಕು ಸಿದ್ದಾಪುರ ಗ್ರಾಮದ ಬಳಿ ಮುಖ್ಯ ರಸ್ತೆಯಲ್ಲಿ ಕೆಎ-01-ಹೆಚ್‍ಎಫ್-8865 ರ ಬೈಕನ್ನು ಸವಾರ ವಿಷ್ಣು ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿದ್ದರಿಂದ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ಪರಿಣಾಮ ಸವಾರ ಗಾಯಗೊಂಡು ಹಿಂಬದಿ ಸವಾರ ಮನೋಜ್‍ ಎಂಬುವವರು ಗಾಯಗೊಂಡು ಮೃತಪಟ್ಟಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಸಿದ್ದಾಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ ಪ್ರಕರಣ

ದಿನಾಂಕ: 01-02-2021 ರಂದು ಮಡಿಕೇರಿ ತಾಲ್ಲೂಕು ಕಕ್ಕಬೆ ಗ್ರಾಮದ ನೆಲಜಿ ಜಂಕ್ಷನ್‍ ಬಳಿ ಕೆಎ-12-ಯು-2170 ರ ಬೈಕನ್ನು ಸವಾರ ಪರದಂಡ ದಿಲನ್‍ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಎದುರುಗಡೆಯಿಂದ ಬರುತ್ತಿದ್ದ ಜೀಪಿಗೆ ಡಿಕ್ಕಿಪಡಿಸಿದ ಪರಿಣಾಮ ಗಾಯಗೊಂಡು ಮೃತಪಟ್ಟಿದ್ದು ಈ ಬಗ್ಗೆ ನೀಡಿದ ದೂರಿನ ಮೇರೆ ನಾಪೋಕ್ಲು ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ ಪ್ರಕರಣ

ದಿನಾಂಕ: 29-01-2021 ರಂದು ಸೋಮವಾರಪೇಟೆ ತಾಲ್ಲೂಕು ಕೊಡ್ಲಿಪೇಟೆ ಗ್ರಾಮದ ಶಾಂತಪುರ ಸೇತುವೆ ಬಳಿ ಮುಖ್ಯ ರಸ್ತೆಯಲ್ಲಿ ಕೆಎ-20-ಇಎಲ್-3523 ರ ಬೈಕನ್ನು ಸವಾರ ಮೊಹಿದೀನ್‍ ನಾಸಿಕ್‍ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿದ ಪರಿಣಾಮ ಬೈಕ್‍ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದುದರಿಂದ ಹಿಂಬದಿ ಸವಾರ ಸುಲೈಮಾನ್‍ ಎಂಬುವವರು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ದಿನಾಂಕ: 01-02-2021 ರಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದು ಈ ಬಗ್ಗೆ ನೀಡಿದ ದೂರಿನ ಮೇರೆ ಶನಿವಾರಸಂತೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ ಪ್ರಕರಣ

ದಿನಾಂಕ: 01-02-2021 ರಂದು ವಿರಾಜಪೇಟೆ ಪಟ್ಟಣದ ಮಟನ್‍ ಮಾರ್ಕೆಟ್‍ ಜಂಕ್ಷನ್‍ ಬಳಿ ಕೆಎ-12-ಎಂ-7940 ರ ಜೀಪನ್ನು ಅದರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿ ಒಂದು  ಆಟೋರಿಕ್ಷಾ, ಕಾರು ಅಂಗಡಿ ಮಳಿಗೆಗೆ ಡಿಕ್ಕಿಪಡಿಸಿದ ಪರಿಣಾಮ ಇಬ್ಬರು ಗಾಯಗೊಂಡು ವಾಹನಗಳು ಹಾಗೂ ಅಂಗಡಿ ಮಳಿಗೆ ಜಖಂಗೊಂಡು ನಷ್ಟವಾಗಿದ್ದು ಈ ಬಗ್ಗೆ ಸಮೀವುಲ್ಲಾ ಎಂಬುವವರು ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.