Crime News
ಹಲ್ಲೆ ಪ್ರಕರಣ
ದಿನಾಂಕ: 02-02-2021 ರಂದು ವಿರಾಜಪೇಟೆ ತಾಲ್ಲೂಕು ಕುಟ್ಟಂದಿ ಗ್ರಾಮದ ನಿವಾಸಿ ಚಂದುರ ಸುಗಣ ಮತ್ತು ಅದೇ ಗ್ರಾಮದ ನಿವಾಸಿಗಳಾದ ಬೋಪಯ್ಯ ಮತ್ತು ಸಂಜು ಎಂಬುವವರು ಜಾಗದ ವಿಚಾರದಲ್ಲಿ ಪರಸ್ಪರ ಜಗಳ ಮಾಡಿ ದೊಣ್ಣೆಯಿಂದ ಹಲ್ಲೆ ಮಾಡಿ ಗಾಯಪಡಿಸಿದ್ದು ಈ ಬಗ್ಗೆ ಉಭಯಕಡೆಯವರು ನೀಡಿದ ಪುಕಾರಿನ ಮೇರೆ ಗೋಣಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
ರಸ್ತೆ ಅಪಘಾತ ಪ್ರಕರಣ
ದಿನಾಂಕ: 02-02-2021 ರಂದು ಕುಶಾಲನಗರ ಪಟ್ಣದ ಟೆಂಡರ್ ಚಿಕನ್ ಅಂಗಡಿ ಮುಂಭಾಗದ ರಸ್ತೆಯಲ್ಲಿ ಕೆ-04-ಪಿ-6344 ರ ಕಾರನ್ನು ಚಾಲಕ ಲಕ್ಷ್ಮಣ ಎಂಬುವವರು ಅತಿವೇಗ ಮತ್ತ ಅಜಾರೂಕತೆಯಿಂದ ಚಾಲನೆ ಮಾಡಿ ಎದುರುಗಡೆಯಿಂಧ ಬರುತ್ತಿದ್ದ ಸ್ಕೂಟರ್ ಗೆ ಡಿಕ್ಕಿಪಡಿಸಿದ ಪರಿಣಾಮ ಸವಾರರಿಬ್ಬರು ರಸ್ತೆಗೆ ಬಿದ್ದು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಕುಶಾಲನಗರ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.