Crime News

ಕಾರು ಅಪಘಾತ

ದಿನಾಂಕ 14-07-2018 ರಂದು ಜಾರ್ಕಾಂಡ್  ರಾಜ್ಯದ ಜಮ್ ಷದ್ ಪುರದವರಾದ ಅಮಿತ್ ತಿವಾರಿ ಎಂಬುವವರು ತನ್ನ ತಂದೆ ತಾಯಿ ಹಾಗೂ ಸಹೋದರನೊಂದಿಗೆ ಕಾರಿನಲ್ಲಿ ಮಡಿಕೇರಿಗೆ ಪ್ರವಾಸಕ್ಕೆಂದು ಬರುತ್ತಿರುವಾಗ ಸುಂಟಿಕೊಪ್ಪ ಠಾಣಾ ಸರಹದ್ದಿನ 7 ನೇ ಹೊಸಕೋಟೆ ಎಂಬಲ್ಲಿಗೆ ತಲುಪುವಾಗ ತಿರುವು ರಸ್ತೆಯಲ್ಲಿ ಕಾರನ್ನು ಚಾಲನೆ ಮಾಡುತ್ತಿದ್ದ ಅಮಿತ್ ತಿವಾರಿಯವರು ಅಜಾಗರೂಕತೆಯಿಂದ ಚಾಲನೆ ಮಾಡಿ ಕಾರು ಮಗುಚಿಕೊಂಡ ಪರಿಣಾಮ ಕಾರಿನಲ್ಲಿದ್ದವರಿಗೆ ಗಾಯಗಳಾಗಿದ್ದು ಈ ಬಗ್ಗೆ ಸುಂಟಿಕೊಪ್ಪ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.