News

ಸಾರ್ವಜನಿಕರ ಗಮನಕ್ಕೆ ……………

ಅಂತರ ಜಿಲ್ಲಾ ಸಂಚಾರಕ್ಕೆ ಆನ್ ಲೈನ್ ಪಾಸ್ ಪಡೆಯಲು ಅವಕಾಶ:

ಕೋವಿಡ್-19 ರ ಸಂಬಂಧ ಕರ್ನಾಟಕ ರಾಜ್ಯದ ವಿವಿಧ ಭಾಗಗಳಲ್ಲಿ ಸಿಲುಕಿರುವ ಯಾತ್ರಿಗಳು, ವಲಸೆ ಕಾರ್ಮಿಕರು, ವಿದ್ಯಾರ್ಥಿಗಳು ಮತ್ತು ಇತರೆ ಜನರು ಅವರ ಸ್ವಂತ ಊರುಗಳಿಗೆ ತೆರಳಲು ದಿನಾಂಕ:04-05-2020 ರಿಂದ ಅನ್ವಯವಾಗುವಂತೆ  ಮುಂದಿನ ಎರಡು ವಾರಗಳವರೆಗೆ ಕೇವಲ ಒಂದು ಬಾರಿ ಪ್ರಯಾಣಕ್ಕೆ ಮಾತ್ರ  (One time One way pass) ಆನ್ ಲೈನ್ ಮೂಲಕ ಪಾಸ್ ವಿತರಿಸಲಾಗುತ್ತಿದ್ದು,  ಸರ್ಕಾರದ ಆದೇಶದಂತೆ ತುರ್ತು ಸಂದರ್ಭದಲ್ಲಿ ಕರ್ನಾಟಕ ರಾಜ್ಯದೊಳಗೆ ಅಂತರ್ ಜಿಲ್ಲೆಗೆ ಹೋಗಿ ಬರಲು ಎರಡು ಕಡೆಯ ಸಂಚಾರಕ್ಕೆ (One time Two way pass)  ಪಾಸ್ ಗಳನ್ನು ಆನ್ ಲೈನ್ ಮೂಲಕ ಒದಗಿಸಲಾಗುತ್ತಿದೆ.

ಅಗತ್ಯವಿರುವ ಅಂತರ್ ಜಿಲ್ಲಾ ಪಾಸ್ ನ್ನು ಕೆಳಗಿನ ಲಿಂಕ್ ಕ್ಲಿಕ್ ಮಾಡಿ Online ಪಾಸ್ ಪಡೆದುಕೊಳ್ಳಿ.

ಆನ್ ಲೈನ್ ಪಾಸ್ ಪಡೆಯಲು ಅಂತರ್ಜಾಲ ತಾಣ: https://kspclearpass.idp.mygate.com  Apply Online Here http://kspclearpass.idp.mygate.com

 ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಕೊಡಗು.

Crime News

ಹಲ್ಲೆ ಪ್ರಕರಣ

            ದಿನಾಂಕ: 04-05-2020 ರಂದು ವಿರಾಜಪೇಟೆ ತಾಲ್ಲೂಕು ಧನುಗಾಲ ಗ್ರಾಮದ ನಿವಾಸಿ ಗುರುಮೂರ್ತಿ ಎಂಬುವವರಿಗೆ ಅದೇ ಗ್ರಾಮದ ನಿವಾಸಿಗಳಾದ ವಿಠಲ, ನಾಚಪ್ಪ, ಸಂಜು ಮತ್ತು ವಿಠಲರವರ ಮಗ ಆಸ್ತಿಯ ವಿಚಾರದಲ್ಲಿ ವೈಮನಸ್ಸಿನಿಂದ ಮನೆಯ ಮುಂದೆ ಹೋಗಿ ಜಗಳ ಮಾಡಿ ದೊಣ್ಣೆಯಿಂದ ಹಲ್ಲೆ ಮಾಡಿ ಗಾಯಪಡಿಸಿ ಕೊಲೆ ಬೆದರಿಕೇ ಹಾಕಿದ್ದು ಈ ಬಗ್ಗೆ ನೀಡದ ಪುಕಾರಿನ ಮೇರೆ ಗೋಣಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಅಕ್ರಮ ಮರಳು ಸಂಗ್ರಹಣೆ ಪ್ರಕರಣ

            ದಿನಾಂಕ: 05-05-2020 ರಂದು ವಿರಾಜಪೇಟೆ ತಾಲ್ಲೂಕು ಬಲ್ಯಮಂಡೂರು ಗ್ರಾಮದ ಬಳಿ ಹರಿಯುತ್ತಿರುವ ಲಕ್ಷ್ಮಣ ತೀರ್ಥ ಹೊಳೆಯಿಂದ ಕೋತೂರು ಗ್ರಾಮದ ನಿವಾಸಿ ರವಿಕುಮಾರ್ ಎಂಬುವವರು ಸರ್ಕಾರದ ಪರವಾನಗಿ ಇಲ್ಲದೆ  ಅಕ್ರಮವಾಗಿ ಮರಳನ್ನು ಕಳ್ಳತನ ಮಾಡಿ ಮಾರಾಟ ಮಾಡುವ ಸಲುವಾಗಿ ಟ್ರಾಕ್ಟರ್ ಗೆ ತುಂಬಿಸುತ್ತಿದ್ದ ಪ್ರಕರಣವನ್ನು ಶ್ರೀಮಂಗಲ ಠಾಣೆ ಪಿಎಸ್ಐ ದಿನೇಶ್ ಕುಮಾರ್ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಹಲ್ಲೆ ಪ್ರಕರಣ

            ದಿನಾಂಕ: 04-05-2020 ರಂದು ರಾತ್ರಿ ವಿರಾಜಪೇಟೆ ತಾಲ್ಲೂಕು ಕಿರಗೂರು ಗ್ರಾಮದ ನಿವಾಸಿ ಶರತ್ ಎಂಬುವವರಿಗೆ ಅದೇ ಗ್ರಾಮದ ನಿವಾಸಿಗಳಾದ ಸಂಜು ಮತ್ತು ಅಲೆಮಾಡ ದಯಾನಂದ ಎಂಬುವವರು ಬೋಪಣ್ಣ ಎಂಬುವವರ ಮನೆಯಲ್ಲಿ ಪಾರ್ಟಿ ಮಾಡುತ್ತಿದ್ದಾಗ ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡಿ ಕೊಲೆ ಮಾಡುವ ಉದ್ದೇಶದಿಂದ ಚಾಕುವಿನಿಂದ ಹಲ್ಲೆ ಮಾಡಿ ಗಾಯಪಡಿಸಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಪೊನ್ನಂಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಹಲ್ಲೆ ಪ್ರಕರಣ

            ದಿನಾಂಕ: 05-05-2020 ರಂದು ವಿರಾಜಪೇಟೆ ತಾಲ್ಲೂಕು ಬಾಳೆಲೆ ಗ್ರಾಮದ ನಿವಾಸಿ ಚಂದ್ರ ಎಂಬುವವರಿಗೆ ಅದೇ ಗ್ರಾಮದ ನಿವಾಸಿ ಅಖಿಲೇಶ್ ಎಂಬುವವರು ಕ್ಷುಲ್ಲಕ ಕಾರಣಕ್ಕೆ ಕತ್ತರಿಯಿಂದ ಹಲ್ಲೆ ಮಾಡಿ ಗಾಯಗೊಳಿಸಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಪೊನ್ನಂಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ ಪ್ರಕರಣ

            ದಿನಾಂಕ: 04-05-2020 ರಂದು ರಾತ್ರಿ ಮಡಿಕೇರಿ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ್ ಟೇಬಲ್ ದಿನೇಶ್ ಟಿ.ಆರ್ ರವರಿಗೆ ಅಬ್ಬಿಫಾಲ್ಸ್ ರಸ್ತೆಯಲ್ಲಿ ಯಾರೋ ಗಲಾಟೆ ಮಾಡುತ್ತಿರುವ ಬಗ್ಗೆ ಮಾಹಿತಿ ತಿಳಿದುಬಂದ ಮೇರೆ ಪೊಲೀಸ್ ಕಾನ್ಸ್ ಟೇಬಲ್ ಮೇದಪ್ಪ ರವರೊಂದಿಗೆ ಸ್ಥಳಕ್ಕೆ ಹೋಗಿದ್ದರು. ಸಾರ್ವಜನಿಕ ಸ್ಥಳದಲ್ಲಿ ಕಾರುಗಳನ್ನು ನಿಲ್ಲಿಸಿಕೊಂಡು ಮದ್ಯಪಾನ ಮಾಡುತ್ತಿದ್ದವರನ್ನು ವಿಚಾರಿಸುತ್ತಿರುವಾಗ  ಅಜಿತ್, ಪವನ್,ಸೋಮಣ್ಣ ಮತ್ತು ಇತರರು ಹೆಡ್ ಕಾನ್ಸ್ ಟೇಬಲ್ ದಿನೇಶ್ ರವರಿಗೆ ಹಲ್ಲೆ ಮಾಡಿ ಸಮವಸ್ರ್ತವನ್ನು ಹರಿದು ಕರ್ತವ್ಯಕ್ಕೆ ಅಡ್ಡಿಪಡಿಸಿದ್ದು ಈ ಬಗ್ಗೆ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿತ ತನಿಖೆ ಕೈಗೊಂಡಿದ್ದಾರೆ.

ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ ಪ್ರಕರಣ

            ದಿನಾಂಖ: 04-05-2020 ರಂದು ರಾತ್ರಿ ಮಡಿಕೇರಿ ನಗರ ಠಾಣೆ ಪಿಎಸ್ಐ ರವರು ಸಿಬ್ಬಂದಿಯವರೊಂದಿಗೆ ನಗರ ಗಸ್ತು ಕರ್ತವ್ಯದಲ್ಲಿರುವಾಗ ಮಡಿಕೇರಿ ನಗರದ ಗೌಳಿಬೀದಿಯ ಮನೆಯೊಂದರಲ್ಲಿ ಜೋರಾಗಿ ಶಬ್ದ ಮಾಡಿಕೊಂಡು ಗಲಾಟೆ ಮಾಡುತ್ತಿರುವುದಾಗಿ ಬಂದ ಮಾಹಿತಿ ಮೇರೆ ಸಿಬ್ಬಂದಿಯವರೊಂದಿಗೆ ಸ್ಥಳಕ್ಕೆ ತೆರಳಿ ಮನೆಯ ಬಳಿ ಹೋಗಿ ಒಳಗಿದ್ದವರನ್ನು ಕರೆದು ವಿಚಾರಿಸಿ ಸೌಂಡ್ ಸಿಸ್ಟಮ್ ಆಫ್ ಮಾಡಲು ಹೇಳಿದಾಗ ಅಲ್ಲಿದ್ದ ಮೂವರು ವ್ಯಕ್ತಿಗಳು ಏಕಾಏಕಿ ಪೊಲೀಸ್ ಕಾನ್ಸ್ ಟೇಬಲ್ ಪ್ರವೀಣ್ ಎಂಬುವವರಿಗೆ ಹಲ್ಲೆ ಮಾಡಿ ಪಿಎಸ್ಐ ರವರೊಂದಿಗೆ ಅನುಚಿತವಾಗಿ ವರ್ತಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದು ಈ ಬಗ್ಗೆ ಮಡಿಕೇರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ, ಬೈಕ್ ಸವಾರ ಸಾವು

            ದಿನಾಂಕ: 05-05-2020 ರಂದು ಸೋಮವಾರಪೇಟೆ ತಾಲ್ಲೂಕು ಶನಿವಾರಸಂತೆ ಗ್ರಾಮದ ಮುಖ್ಯ ರಸ್ತೆಯಲ್ಲಿ ಕೆಎ-13-ಸಿ-2942 ರ ಪಿಕ್ ಅಪ್ ವಾಹನವನ್ನು ಅದರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಕೆಎ-12-ಎಲ್-8263 ರ ಬೈಕ್ ಗೆ ಡಿಕ್ಕಿಪಡಿಸಿದ ಪರಿಣಾಮ ಬೈಕ್ ಸವಾರ  ವಿಜಯಕುಮಾರ್ ಎಂಬುವವರು ರಸ್ತೆಗೆ ಬಿದ್ದು ಗಾಯಗೊಂಡು ಮೃತಪಟ್ಟಿದ್ದು ಹಿಂಬದಿ ಸವಾರ ಮುಜಾಹಿದ್ ಪಾಷಾ ಎಂಬುವವರು ಗಾಯಗೊಂಡಿದ್ದು ಈ ಬಗ್ಗೆ ಮೃತರ ತಂದೆ ನೀಡಿದ ಪುಕಾರಿನ ಮೇರೆ ಶನಿವಾರಸಂತೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.