News

#ಪ್ರಾಕೃತಿಕ_ವಿಪತ್ತು_ನಿರ್ವಹಣೆಯ_ಪ್ರಾಯೋಗಿಕ_ತರಬೇತಿ:

ಪ್ರಾಕೃತಿಕ ವಿಪತ್ತು ನಿರ್ವಹಣಾ ಸಂಬಂಧ ಎನ್.ಡಿ.ಆರ್.ಎಫ್ ವತಿಯಿಂದ ಜಿಲ್ಲೆಯ ಪೊಲೀಸ್ ಇಲಾಖೆ, ಅಗ್ನಿಶಾಮಕ ದಳ, ಗೃಹರಕ್ಷಕ ದಳದ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ತರಬೇತಿ ಕಾರ್ಯಾಗಾರವನ್ನು ಜಿಲ್ಲಾ ಪೊಲೀಸ್ ಕಛೇರಿಯ ಕಿರು ಸಭಾಂಗಣದಲ್ಲಿ ದಿನಾಂಕ 08-06-2020 ರಿಂದ ಆಯೋಜಿಸಲಾಗಿದೆ. ಈ ಕಾರ್ಯಾಗಾರದ  ಭಾಗವಾಗಿ ಈ ದಿನ ಕೊಡಗು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮುಖ್ಯಸ್ಥರಾದ ಶ್ರೀಮತಿ ಅನ್ನೀಸ್ ಕಣ್ಮಣಿ ಜಾಯ್, ಐ.ಎ.ಎಸ್, ರವರ ಉಪಸ್ಥಿತಿಯಲ್ಲಿ ಎನ್.ಡಿ.ಆರ್.ಎಫ್ ತಂಡದ ವತಿಯಿಂದ ಕಾರ್ಯಾಗಾರದಲ್ಲಿ ಪಾಲ್ಗೊಂಡಿರುವ ಪೊಲೀಸ್ ಇಲಾಖೆ, ಅಗ್ನಿಶಾಮಕ ದಳ, ಗೃಹರಕ್ಷಕ ದಳ ಮತ್ತು ಅರಣ್ಯ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ಹಾರಂಗಿ ಜಲಾಶಯದ ಹಿನ್ನೀರಿನ ಪ್ರದೇಶದಲ್ಲಿ ಪ್ರಾಕೃತಿಕ ವಿಕೋಪ ಸಂದರ್ಭದ ರಕ್ಷಣಾ ಕಾರ್ಯಗಳ  ಬಗ್ಗೆ ಪ್ರಾಯೋಗಿಕ ತರಬೇತಿಯನ್ನು ನೀಡಲಾಯಿತು.