News

ಕೊಡಗು ಜಿಲ್ಲಾ ಪೊಲೀಸ್ ಘಟಕದಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ ಎ.ಎಸ್.ಐ ಶ್ರೀ ಜಾನ್ ಪೆರೆರಾ ರವರನ್ನು ಅವರ ಕುಟುಂಬದ ಸಮ್ಮುಖದಲ್ಲಿ ಸನ್ಮಾನಿಸಿ ಬೀಳ್ಕೊಡುಗೆ ನೀಡಲಾಯಿತು.

Crime News

ಆನ್ ಲೈನ್ ವಂಚನೆ ಪ್ರಕರಣ

ದಿನಾಂಕ: 25-06-2020 ರಂದು ಮಡಿಕೇರಿ ತಾಲ್ಲೂಕು ಸಣ್ಣಪುಲಿಕೋಟು ಗ್ರಾಮದ ನಿವಾಸಿ ದಿನೇಶ ಎಂಬುವವರ ಪತ್ನಿಯವರ ಮೊಬೈಲ್ ನಂಬರ್ ಗೆ 6295091437 ಸಂಖ್ಯೆಯಿಂದ ಕರೆ ಮಾಡಿ ಅಪರಿಚಿತ ವ್ಯಕ್ತಿಯೊಬ್ಬ ಮ್ಯೂಚುವಲ್ ಫಂಡ್ ನಿಂದ ಕರೆ ಮಾಡುತ್ತಿದ್ದು ಮ್ಯೂಚುವಲ್ ಫಂಡ್ ಅಕೌಂಟ್ ಬಂದ್ ಆಗಿರುವುದಾಗಿ ಎಂದು ಹೇಳಿ ಎಟಿಎಂ ಕಾರ್ಡ್ ನಂಬರ್ ಕೇಳಿದಾಗ ಎ.ಟಿ.ಎಂ ಕಾರ್ಡ್ ಇಲ್ಲವೆಂದು ತಿಳಿಸಿರುತ್ತಾರೆ. ನಂತರ ಆತನು ಕಳುಹಿಸಿದ ಕ್ಯೂ.ಆರ್ ಕೋಡ್ ಗೆ ಫೋನ್ ಪೇ ಮೂಲಕ ಲಿಂಕ್ ಕೊಡಲು ಹೇಳಿದ್ದು ಅದರಂತೆ ಕೋಡ್ ಗೆ ಲಿಂಕ್ ಕೊಟ್ಟಾಗ ಹಂತ ಹಂತವಾಗಿ ಒಟ್ಟು 98,341 ರೂ ಹಣ ಖಾತೆಯಿಂದ ಕಡಿತಗೊಂಡಿದ್ದು,ಮೋಸದಿಂದ ಬ್ಯಾಂಕ್ ಖಾತೆಯಿಂದ ಹಣ ವರ್ಗಾವಣೆ ಮಾಡಿಕೊಂಡು ವಂಚನೆ ಮಾಡಿರುವ ಬಗ್ಗೆ ನೀಡಿದ ಪುಕಾರಿನ ಮೇರೆ ಕೊಡಗು ಸೈಬರ್ ಅಪರಾಧ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಸಾರ್ವಜನಿಕರು ಆನ್ ಲೈನ್ ಹಣಕಾಸು ವ್ಯವಹಾರಕ್ಕಾಗಿ ತಮ್ಮ ಬ್ಯಾಂಕ್  ನ ಅಧಿಕೃತ ಅಪ್ಲಿಕೇಶನ್ ಗಳನ್ನು ಬಳಸುವುದು. ಬ್ಯಾಂಕ್ ಅಥವಾ ಇತರೆ ಹಣಕಾಸು ಸಂಸ್ಥೆಗಳ ಅಧಿಕಾರಿಗಳ ಹೆಸರಿನಲ್ಲಿ ಕರೆ ಮಾಡಿ ಮೋಸದಿಂದ ಆನ್ ಲೈನ್ ಮೂಲಕ ಹಣ ವರ್ಗಾವಣೆ ಮಾಡಿಕೊಂಡು ಸಾರ್ವಜನಿಕರಿಗೆ ವಂಚನೆ ಮಾಡುತ್ತಿರುವ ಪ್ರಕರಣಗಳು ಹೆಚ್ಚು ವರದಿಯಾಗುತ್ತಿದೆ. ಯಾವುದೇ ಅಧಿಕೃತ ಬ್ಯಾಂಕ್ ಅಥವಾ ಹಣಕಾಸು ಸಂಸ್ಥೆಗಳು ಸಾರ್ವಜನಿಕರೊಂದಿಗೆ ಫೋನ್ ಮೂಲಕ ವ್ಯವಹರಿಸುವುದಿಲ್ಲ. ಸಾರ್ವಜನಿಕರು ತಮ್ಮ ಬ್ಯಾಂಕ್ ಖಾತೆ, ಎ.ಟಿ.ಎಂ, ಮ್ಯೂಚುವಲ್ ಫಂಡ್, ಉಳಿತಾಯ ಪತ್ರಗಳು ಹಾಗೂ ಇತರ ಯಾವುದೇ  ರೀತಿಯ ಹಣಕಾಸು ವಹಿವಾಟಿನ ಪ್ರಕ್ರಿಯೆಗಳಲ್ಲಿ ತೊಡಕುಂಟಾದಾಗ ನೇರವಾಗಿ ಸಂಬಂದಪಟ್ಟ ಬ್ಯಾಂಕ್ ಅಥವಾ ಹಣಕಾಸು ಸಂಸ್ಥೆಗಳಿಗೆ ತೆರಳಿ ಪರಿಹರಿಸಿಕೊಳ್ಳುವುದು. ಹಣಕಾಸು ಸಂಸ್ಥೆಗಳ ಹೆಸರಿನಲ್ಲಿ ಕರೆ ಮಾಡುವ ವ್ಯಕ್ತಿಗಳು ಬ್ಯಾಂಕ್ ಅಕೌಂಟ್ ನಂಬರ್, ಎ.ಟಿ.ಎಂ ನಂಬರ್, ಸಿವಿವಿ ನಂಬರ್, ಒ.ಟಿ.ಪಿ, ಎಟಿಎಂ ಪಿನ್ ನಂಬರ್, ಗೂಗಲ್ ಪೇ, ಫೋನ್ ಪೇ, ಇತರೆ ಯು.ಪಿ.ಐ ಆಧಾರಿತ ಆನ್ ಲೈನ್ ಹಣಕಾಸು ವರ್ಗಾವಣೆ ಅಪ್ಲಿಕೇಶನ್ ಗಳ ಕೋಡ್ ಗಳನ್ನು ಕೇಳಿ ಪಡೆದು ವಂಚನೆ ಮಾಡುತ್ತಿದ್ದು ಇಂತಹ ಗೌಪ್ಯ ಸಂಖ್ಯೆಗಳನ್ನು ಯಾರಿಗೂ ನೀಡದಂತೆ ಸೂಚಸಲಾಗಿದೆ.

ಕಳವು ಪ್ರಕರಣ

ದಿನಾಂಕ: 27-06-2020 ರಂದು ವಿರಾಜಪೇಟೆ ಪಟ್ಟಣದ ವಿಜಯನಗರ ನಿವಾಸಿ ಉತ್ತಪ್ಪ ಎಂಬುವವರ ಮನೆಯಲ್ಲಿದ್ದ ಗಾಡ್ರೆಜ್ ಬೀರುವಿನ ಲಾಕರ್ ನಲ್ಲಿಟ್ಟಿದ್ದ 78,000 ಮೌಲ್ಯದ ಚಿನ್ನಾಭರಣಗಳನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ದಿನಾಂಕ: 29-06-2020 ರಂದು ನೀಡಿದ ಪುಕಾರಿನ ಮೇರೆ ವಿರಾಜಪೇಟೆ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.