News

ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷಾ ಮಾಹಿತಿ:

2020ನೇ ಸಾಲಿನಲ್ಲಿ ಕೊಡಗು ಜಿಲ್ಲಾ ಪೊಲೀಸ್ ಘಟಕದಲ್ಲಿ ಖಾಲಿ ಇರುವ ಸಿವಿಲ್ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆಯನ್ನು ದಿನಾಂಕ 20-09-2020ರ ಭಾನುವಾರದಂದು ಮಡಿಕೇರಿ ಹಾಗು ಕುಶಾಲನಗರದ ವಿವಿಧ ಶಾಲಾ ಕಾಲೇಜುಗಳಲ್ಲಿ ನಡೆಸಲಾಗುತ್ತಿದ್ದು ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಪೊಲೀಸ್ ಇಲಾಖಾ ವೆಬ್ ಸೈಟ್ www.ksp.gov.in ರಲ್ಲಿ ಡೌನ್ಲೋಡ್ ಮಾಡಿಕೊಂಡು ನಿಗದಿಪಡಿಸಿದ ಭಾವಚಿತ್ರವಿರುವ ಗುರುತಿನ ದಾಖಲಾತಿಯೊಂದಿಗೆ ಪರೀಕ್ಷೆಗೆ ಹಾಜರಾಗುವಂತೆ ತಿಳಿಸಿದೆ.