News

ಮಹಿಳಾ ಪೊಲೀಸರ “ಕಾವೇರಿ ಪಡೆ”  ರಚನೆ:

ಕೊಡಗು ಜಿಲ್ಲೆಯಲ್ಲಿ ಮಹಿಳೆಯರ ಮತ್ತು ಮಕ್ಕಳ ಸುರಕ್ಷತೆಯ ಸಲುವಾಗಿ ಕೊಡಗು ಜಿಲ್ಲಾ ಪೊಲೀಸ್‍ ವತಿಯಿಂದ 18 ಮಹಿಳಾ ಪೊಲೀಸ್‍ ಅಧಿಕಾರಿ ಮತ್ತು ಸಿಬ್ಬಂದಿಯನ್ನೊಳಗೊಂಡ “ಕಾವೇರಿ ಪಡೆ” ಎಂಬ ಮಹಿಳಾ ಪೊಲೀಸರ ತಂಡವನ್ನು ರಚನೆ ಮಾಡಲಾಗಿರುತ್ತದೆ.

ಈ ಮಹಿಳಾ ಪೊಲೀಸ್‍ ತಂಡದ ಸದಸ್ಯರಿಗೆ ಪ್ರತ್ಯೇಕವಾದ ಸಮವಸ್ತ್ರವನ್ನು ಒದಗಿಸಲಾಗಿರುತ್ತದೆ ಹಾಗೂ ಕಾವೇರಿ ಪಡೆಯ ಸಿಬ್ಬಂದಿಗಳು ಜಿಲ್ಲೆಯ ಎಲ್ಲಾ ಪ್ರಮುಖ ಪಟ್ಟಣಗಳಲ್ಲಿ ಗಸ್ತು ತಿರುಗಲು ಪ್ರತ್ಯೇಕವಾದ ಒಂದು ವಾಹನದ ವ್ಯವಸ್ಥೆಯನ್ನು ಮಾಡಲಾಗಿರುತ್ತದೆ. ಈ ಪಡೆಯು ಪ್ರತಿ ದಿನ ಜಿಲ್ಲೆಯ ವಿವಿಧ ಪಟ್ಟಣಗಳ ಶಾಲಾ ಕಾಲೇಜು, ಬಸ್‍ ನಿಲ್ದಾಣ ಹಾಗೂ ಇನ್ನಿತರ ಜನನಿಬಿಡ ಪ್ರದೇಶಗಳಲ್ಲಿ ಮಹಿಳೆಯರು ಹಾಗೂ ಹೆಣ್ಣುಮಕ್ಕಳು ಓಡಾಡುವ ಸ್ಥಳಗಳಲ್ಲಿ ಮಹಿಳೆಯರ ರಕ್ಷಣೆಯ ಬಗ್ಗೆ ಸೂಕ್ತ ನಿಗಾ ವಹಿಸುತ್ತಾರೆ. ಕಾವೇರಿ ಪಡೆಯನ್ನು ಎರಡು ತಂಡಗಳಾಗಿ ವಿಭಾಗಿಸಲಾಗಿದ್ದು ಸರದಿಯಂತೆ ಕರ್ತವ್ಯ ನಿರ್ವಹಿಸುತ್ತಾರೆ. ಕಾವೇರಿ ಪಡೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ವಿವಿಧ ಕಾನೂನುಗಳ ಬಗ್ಗೆ ತಿಳುವಳಿಕೆ, ಪೊಲೀಸ್‍ ಮ್ಯಾನುವಲ್, ಜನಸ್ನೇಹಿ ಪೊಲೀಸ್, ಲಿಂಗಸಂವೇದನೆ ಹಾಗೂ ಮಹಿಳೆಯವರ ಮತ್ತು ಮಕ್ಕಳ ಬಗೆಗಿನ ಕಾನೂನಿನ ಬಗ್ಗೆ ತರಬೇತಿ ನೀಡಿ ತಿಳುವಳಿಕೆ ಮೂಡಿಸಲಾಗಿರುತ್ತದೆ. ಪ್ರಸ್ತುತ ಸನ್ನಿವೇಶದಲ್ಲಿ ಮಹಿಳೆಯರು ಮತ್ತು ಮಕ್ಕಳು ಎದುರಿಸುತ್ತಿರುವ ಸವಾಲು ಹಾಗೂ ಅವರ ರಕ್ಷಣೆಯ ಬಗ್ಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ತಿಳುವಳಿಕೆ ಮೂಡಿಸಲಾಗಿರುತ್ತದೆ. ಇದು ಮಹಿಳೆಯರಿಂದ ಮಹಿಳಯರಿಗಾಗಿ ಮಹಿಳೆಯರ ರಕ್ಷಣೆಗೋಸ್ಕರವೇ ರೂಪಿಸಲ್ಪಟ್ಟ ೊಂದು ವಿಶೇಷ ಪಡೆಯಾಗುರುತ್ತದೆ. ಜಿಲ್ಲೆಯಲ್ಲಿನ ಯಾವುದೇ ಮಹಿಳೆಯರು ಶಾಲಾ ಕಾಲೇಜಿನ ಹೆಣ್ಣು ಮಕ್ಕಳು ತಮಗೆ ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ರೀತಿಯ ತೊಂದರೆ/ಉಪದ್ರವ ಉಂಟಾದಲ್ಲಿ ನೇರವಾಗಿ ಕಾವೇರಿ ಪಡೆಯ ಅಧಿಕಾರಿಗಳಿಗೆ ಅಥವಾ ಪೊಲೀಸ್‍ ಕಂಟ್ರೋಲ್‍ ರೂಂ ಸಂಖ್ಯೆ 100 ಅಥವಾ ತುರ್ತು ಸ್ಪಂದನ ಸಹಾಯ ವ್ಯವಸ್ಥೆ 112 ಕ್ಕೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ.

CRIME NEWS

ಬೈಕ್‍ ಅಪಘಾತ, ಸವಾರ ಸಾವು.

ದಿನಾಂಕ: 29-09-2020 ರಂದು ಸೋಮವಾರಪೇಟೆ ತಾಲ್ಲೂಕು ಆಲೂರು ಸಿದ್ದಾಪುರ ಗ್ರಾಮದ ಬಳಿ ಮುಖ‍್ಯ ರಸ್ತೆಯಲ್ಲಿ ಅರಿಶಿನಗುಪ್ಪೆ ಗ್ರಾಮದ ನಿವಾಸಿ ಧರ್ಮಶೆಟ್ಟಿ ಎಂಬುವವರು ಅವರ ಬೈಕನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿದ ಪರಿಣಾಮ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್‍ ಕಂಬಕ್ಕೆ ಡಿಕ್ಕಿಯಾಗಿ ತಲೆಗೆ ಗಾಯಗೊಂಡವರನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಗಾಯಾಳು ಮೃತಪಟ್ಟಿದ್ದು ಈ ಬಗ್ಗೆ ಮೃತರ ಸಹೋದರ ನೀಡಿದ ದೂರಿನ ಮೇರೆ ಶನಿವಾರಸಂತೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ ಪ್ರಕರಣ

ದಿನಾಂಕ: 30-09-2020 ರಂದು  ಸೋಮವಾರಪೇಟೆ ತಾಲ್ಲೂಕು ಆಲೂರು ಸಿದ್ದಾಪುರ ಗ್ರಾಮದ ಬಳಿ ಮುಖ‍್ಯ ರಸ್ತೆಯಲ್ಲಿ ಒಡೆಯನಪುರ ನಿವಾಸಿ ಹಸೈನಾರ್ ಎಂಬುವವರು ಬೈಕನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿದ ಪರಿಣಾಮ ಬೈಕ್‍ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದು ಬೈಕ್‍ ಸವಾರ ಹಾಗೂ ಹಿಂಬದಿ ಸವಾರ ಸಮ್ಮದ್‍ ಎಂಬುವವರು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಶನಿವಾರಸಂತೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಕಾರಿಗೆ ಬೈಕ್‍ ಡಿಕ್ಕಿ, ಸವಾರ ಸಾವು.

ದಿನಾಂಕ: 30-09-2020 ರಂದು  ಸೋಮವಾರಪೇಟೆ ತಾಲ್ಲೂಕು ಗರಗಂದೂರು ಗ್ರಾಮದ ಬಳಿ ಮುಖ‍್ಯ ರಸ್ತೆಯಲ್ಲಿ ಕೆಎ-51-ಎಲ್‍-3054 ರ ಬೈಕನ್ನು ಸವಾರ ಸುರೇಶ್‍ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಎದುರುಗಡೆಯಿಂದ ಬರುತ್ತಿದ್ದ ಕೆಎ-12-ಎನ್‍-7109 ರ ಕಾರಿಗೆ ಡಿಕ್ಕಿಪಡಿಸಿದ ಪರಿಣಾಮ ಬೈಕ್‍ ಸವಾರರಿಬ್ಬರೂ ಗಾಯಗೊಂಡು ಚಿಕಿತ್ಸೆ ಆಸ್ಪತ್ರಗೆ ದಾಖಲಾಗಿದ್ದರು.  ಗಾಯಗೊಂಡಿದ್ದ ಹಿಂಬದಿ ಸವಾರ ನಿತಿನ್‍ ಎಂಬುವವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಸುಂಟಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ವ್ಯಕ್ತಿ ಕಾಣೆ ಪ್ರಕರಣ

ದಿನಾಂಕ: 27-09-2020 ರಂದು ವಿರಾಜಪೇಟೆ ತಾಲ್ಲೂಕು ಅರಪಟ್ಟು ಗ್ರಾಮದ ನಿವಾಸಿ ಬೆಟ್ಟನಾಯಕ @ ರಾಮ ಎಂಬುವವರು ಪೊನ್ನಂಪೇಟೆಗೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೊರ ಹೋದವರು ಈ ವರೆಗೂ ವಾಪಾಸ್ಸು ಬಾರದೇ ಕಾಣೆಯಾಗಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.