NEWS

ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ದಿನದಿಂದ ದಿನಕ್ಕೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಜಾಗರೂಕತೆಯಿಂದ ಇರಬೇಕಾಗಿದೆ. ಪ್ರತಿಯೊಬ್ಬರೂ ಕೋವಿಡ್-19 ಸೋಂಕನ್ನು ತಡೆಗಟ್ಟುವ ಸಂಬಂಧ ಕೈಗೊಳ್ಳಬೇಕಾದ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಲ್ಲಿ ಮಾತ್ರ ಕೋವಿಡ್-19 ಸೋಂಕನ್ನು ತಡೆಗಟ್ಟಬಹುದಾಗಿದ್ದು ಈ ನಿಟ್ಟಿನಲ್ಲಿ ಎಲ್ಲರ ಸಹಕಾರ ಅತ್ಯಗತ್ಯವಾಗಿದೆ.

 

 

 

 

 

 

 

 

 

 

 

 

 

 

 

 

 

 

 

 

 

 

ಸಶಸ್ತ್ರ ಪೊಲೀಸ್_ಹುದ್ದೆಗೆ ಲಿಖಿತ ಪರೀಕ್ಷೆ ಸಂಬಂಧ ಮಾಹಿತಿ

2020ನೇ ಸಾಲಿನಲ್ಲಿ ಕೊಡಗು ಜಿಲ್ಲಾ ಘಟಕದಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸಿರುವ ಅರ್ಹ ಅರ್ಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆಯನ್ನು ದಿನಾಂಕ 18-10-2020 ರಂದು ಮಡಿಕೇರಿ ನಗರದ ನಾಲ್ಕು ಪರೀಕ್ಷಾ ಕೇಂದ್ರಗಳಾದ (1) ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು, ಮಡಿಕೇರಿ, (2) ಸಂತ ಜೋಸೆಫರ ಪ್ರೌಢಶಾಲೆ, ಮಡಿಕೇರಿ, (3) ಸಂತ ಜೋಸೆಫರ ಪಿ.ಯು. ಕಾಲೇಜು, ಮಡಿಕೇರಿ ಹಾಗು (4) ಸರಕಾರಿ ಪಿ.ಯು. ಕಾಲೇಜು, ಮಡಿಕೇರಿ ಗಳಲ್ಲಿ ನಡೆಸಲಾಗುತ್ತಿದ್ದು ಅಭ್ಯರ್ಥಿಗಳು ಪ್ರವೇಶ ಪತ್ರ/ಹಾಜರಾತಿ ಪತ್ರವನ್ನು ಪೊಲೀಸ್ ಇಲಾಖೆಯ ವೆಬ್ ಸೈಟ್ www.ksp.gov.in ರಲ್ಲಿ ಡೌನ್ ಲೋಡ್ ಮಾಡಿಕೊಂಡು ಅದರಲ್ಲಿ ನಿಗದಿಪಡಿಸಿದ ಭಾವಚಿತ್ರವಿರುವ ದಾಖಲಾತಿಗಳೊಂದಿಗೆ ಪರೀಕ್ಷೆಗೆ ಹಾಜರಾಗುವಂತೆ ಸೂಚಿಸಲಾಗಿದೆ.

 

 

 

 

 

 

 

 

 

 

 

 

 

ದಿನಾಂಕ 17-10-2020 ರಂದು ನಡೆಯಲಿರುವ ಕಾವೇರಿ ತೀರ್ಥೋದ್ಭವ ಜಾತ್ರಾ ಪ್ರಯುಕ್ತ ಕೈಗೊಳ್ಳಬೇಕಾದ ಬಂದೋಬಸ್ತ್ ಮತ್ತು ಮುಂಜಾಗೃತಾ ಕ್ರಮಗಳ ಕುರಿತು ಇಂದು ಜಿಲ್ಲಾಧಿಕಾರಿಗಳೊಂದಿಗೆ ತಲಕಾವೇರಿ ಮತ್ತು ಭಾಗಮಂಡಲಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು.

CRIME NEWS

ಕಳ್ಳತನ ಪ್ರಕರಣ

ದಿನಾಂಕ: 07-10-2020 ರಂದು ಮಡಿಕೇರಿ ತಾಲ್ಲೂಕು ಕರ್ಣಂಗೇರಿ ಗ್ರಾಮದ  ದಿಲ್‍ ಕುಶ್‍ ಎಸ್ಟೇಟ್‍ ನಲ್ಲಿರುವ ಆಶಾಕುಮಾರ್‍ ಎಂಬುವವರಿಗೆ ಸೇರಿದ ಮನೆಯ ಬಾಗಿಲನ್ನು ಯಾರೋ ಕಳ್ಳರು ಮುರಿದು ಒಳನುಗ್ಗಿ ಮನೆಯೊಳಗಿದ್ದ ಅಂದಾಜು 6,40,000 ರೂ ಮೌಲ್ಯದ  ಪುರಾತನ ವಿಗ್ರಹಗಳು , ಎಲೆಕ್ಟ್ರಾನಿಕ್ ಉಪಕರಣಗಳು ಮತ್ತು ಗೃಹೋಪಯೋಗಿ ವಸ್ತುಗಳನ್ನು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ಎಸ್ಟೇಟ್‍ ನೋಡಿಕೊಳ್ಳುತ್ತಿದ್ದ ಚಂದ್ರವತಿ ಎಂಬುವವರು ಕಳ್ಳತನ ವಿಚಾರವನ್ನು ಮಾಲೀಕರಿಗೆ ತಿಳಿಸಿ ದಿನಾಂಕ: 13-10-2020 ರಂದು ನೀಡಿದ ಪುಕಾರಿನ ಮೇರೆ ಮಡಿಕೇರಿ ಗ್ರಾಮಾಂತರ  ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ, ವ್ಯಕ್ತಿ ಸಾವು.

ದಿನಾಂಕ: 13-10-2020 ರಂದು ವಿರಾಜಪೇಟೆ ತಾಲ್ಲೂಕು ಜೋಡುಬೀಡಿ ಗ್ರಾಮದ ಬಳಿ ಮುಖ‍್ಯ ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪ್ರಮೋದ್ ದಾಸ್‍ ಎಂಬುವವರಿಗೆ ಯಾವುದೋ ಒಂದು ವಾಹನ ಪೊನ್ನಂಪೇಟೆ ಕಡೆಯಿಂದ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಡಿಕ್ಕಿಪಡಿಸಿದ ಪರಿಣಾಮ ಗಾಯಗೊಂಡು ಮೃತಪಟ್ಟಿದ್ದು, ಚಾಲಕ ವಾಹನವನ್ನು ನಿಲ್ಲಿಸದೇ ಹೋಗಿದ್ದು ಈ ಬಗ್ಗೆ ಸುಂದರ ಎಂಬುವವರು ನೀಡಿದ ಪುಕಾರಿನ ಮೇರೆ ಗೋಣಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಬೈಕ್‍ ಡಿಕ್ಕಿ, ಪಾದಚಾರಿಗಳಿಗೆ ಗಾಯ.

ದಿನಾಂಕ: 12-10-2020 ರಂದು ಸೋಮವಾರಪೇಟೆ ತಾಲ್ಲೂಕು ಗುಡ್ಡೆಹೊಸೂರು ಗ್ರಾಮದ ಬಳಿ ಹೆದ್ದಾರಿ ರಸ್ತೆಯಲ್ಲಿ ಕೆಎ-19-ವಿ-8826 ರ ದ್ವಿಚಕ್ರ ವಾಹವನ್ನು ಅದರ ಸವಾರ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸುನಿಲ್‍ ಮತ್ತು ನೂರುಲ್ಲಾ ಎಂಬುವವರಿಗೆ ಡಿಕ್ಕಿಪಡಿಸಿದ ಪರಿಣಾಮ ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಕುಶಾಲನಗರ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.