News
ಜಿಲ್ಲೆಯ ತಲಕಾವೇರಿಯಲ್ಲಿ ನಡೆಯುವ ಪವಿತ್ರ ಕಾವೇರಿ ತೀರ್ಥೋದ್ಭವವು ಇಂದು ಬೆಳಿಗ್ಗೆ 7-05 ಗಂಟೆಗೆ ನಿಗದಿಯಂತೆ ನಡೆಯಿತು. ಕೋವಿಡ್-19 ಸಾಂಕ್ರಾಮಿಕ ಸಂಬಂಧ ಸಾಂಪ್ರದಾಯಿಕವಾಗಿ ಜಾತ್ರೆಯನ್ನು ಆಚರಿಸಲಾಗಿದ್ದು, ಸೂಕ್ತ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು. ಜಾತ್ರೆಯು ಶಾಂತಿಯುತವಾಗಿ ಸಂಪನ್ನಗೊಂಡಿತು.
ಜಾತ್ರಾ ಮಹೋತ್ಸವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ವಿ.ಸೋಮಣ್ಣ ಹಾಗು ಜಿಲ್ಲೆಯ ಶಾಸಕರು ಮತ್ತು ಜನಪ್ರತಿನಿಧಿಗಳು ಹಾಜರಿದ್ದು ಪವಿತ್ರ ತೀರ್ಥೋದ್ಭವವನ್ನು ಸಾಕ್ಷಿಯಾದರು.
CRIME NEWS
ಅಕ್ರಮ ಮದ್ಯ ಸಾಗಾಟ ಪ್ರಕರಣ
ದಿನಾಂಕ: 16-10-2020 ರಂದು ವಿರಾಜಪೇಟೆ ತಾಲ್ಲೂಕು ಬೆಳ್ಳೂರು ಗ್ರಾಮದ ಬಳಿ ಅಕ್ರಮವಾಗಿ ಮಾರಾಟ ಮಾಡಲು ಕಾರಿನಲ್ಲಿ ಮದ್ಯ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಶ್ರೀಮಂಗಲ ಠಾಣೆ ಪಿಎಸ್ಐ ಆರ್ ಮಂಚಯ್ಯ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.