News
ಕೊಡಗು ಜಿಲ್ಲೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ದಿನಾಂಕ 18-10-2020 ರಂದು ಜಿಲ್ಲೆಯ ಮಡಿಕೇರಿ ನಗರದ 4 ಪರೀಕ್ಷಾ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆಯನ್ನು ನಡೆಸಲಾಯಿತು.
ಜಿಲ್ಲೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಾಗಿ ಒಟ್ಟು 1120 ಅಭ್ಯರ್ಥಿಗಳು ಲಿಖಿತ ಪರೀಕ್ಷೆಗೆ ಹಾಜರಾಗಿದ್ದರು.
CRIME NEWS
ಕಳವು ಪ್ರಕರಣ
ದಿನಾಂಕ: 16-10-2020 ರಂದು ವಿರಾಜಪೇಟೆ ತಾಲ್ಲೂಕು ಕಡಂಗ ಮರೂರು ಗ್ರಾಮದಲ್ಲಿರುವ ಕರವಟ್ಟಿರ ಕುಟುಂಬಸ್ಥರಿಗೆ ಸೇರಿದ ಐನ್ ಮನೆ ಬಾಗಿಲಿಗೆ ಹಾಕಿದ್ದ ಬೀಗವನ್ನು ಯಾರೋ ಕಳ್ಳರು ಮುರಿದು ಒಳನುಗ್ಗಿ ಭಂಡಾರದ ಪಟ್ಟಿಗೆಯ ಬೀಗವನ್ನು ಮುರಿದು ಚಿನ್ನದ ನಾಣ್ಯ ಮತ್ತು ಅಂದಾಜು ರೂ.1000 ನಗದು ಹಣವನ್ನು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ಕಾವೇರಪ್ಟ ಎಂಬುವವರು ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.