News

ರಾಷ್ಟ್ರೀಯ ಮತದಾರರ ದಿನ”  ಆಚರಣೆ.

ದಿನಾಂಕ: 21-01-2021 ರಂದು ಕೊಡಗು ಜಿಲ್ಲಾ ಪೊಲೀಸ್ ವತಿಯಿಂದ “ರಾಷ್ಟ್ರೀಯ ಮತದಾರರ ದಿನ” ವನ್ನು ಮಡಿಕೇರಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರು ಹಾಗೂ ಗೃಹ ರಕ್ಷಕ ದಳದ ಸಿಬ್ಬಂದಿಯವರು ಪಾಲ್ಗೊಂಡು ಪ್ರತಿಜ್ಞೆ ಸ್ವೀಕರಿಸಿದರು. ಮಡಿಕೇರಿ ಉಪವಿಭಾಗದ ಪೊಲೀಸ್ ಉಪಅಧೀಕ್ಷಕರಾದ ಬಿ.ಪಿ ದಿನೇಶ್‍ ಕುಮಾರ್ ರವರು ರಾಷ್ಟ್ರೀಯ ಮತದಾರರ ದಿನದ ಪ್ರತಿಜ್ಞೆ ಯನ್ನು ಬೋಧಿಸಿದರು.

       18 ವರ್ಷಕ್ಕೆ ಮೇಲ್ಪಟ್ಟ ಎಲ್ಲ ಭಾರತೀಯ ನಾಗರೀಕರು ಮತದಾರರ ಪಟ್ಟಿಯಲ್ಲಿ ಹೆಸರು ನೊಂದಾಯಿಸಿಕೊಂಡು ಚುನಾವಣಾ ಸಂದರ್ಭದಲ್ಲಿ ಖಡ್ಡಾಯವಾಗಿ ಮತದಾನ ಮಾಡಬೇಕೆಂಬ ಸಂದೇಶ ಸಾರುವುದಕ್ಕಾಗಿ ಈ ದಿನವನ್ನು ಆಚರಿಸಲಾಗುತ್ತಿದೆ. ಭಾರತ ಪ್ರಜಾಪ್ರಭುತ್ವ ರಾಷ್ಟ್ರ. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಮತದಾನದ ಪಾತ್ರ ಅತ್ಯಂತ ಮಹತ್ತರವಾದುದು. ಮತದಾನ ಜನರ ಪ್ರಮುಖ ಹಕ್ಕು. ಪ್ರಜೆಗಳಿಂದ ಆಯ್ಕೆಯಾದ ಸರ್ಕಾರ ಜನರ ಆಶೋತ್ತರಗಳಂತೆಯೇ ನಡೆಯಬೇಕೆಂಬುದು ಸಂವಿಧಾನದ ನಿಯಮ. ತಮ್ಮ ಒಳಿತನ್ನು ಬಯಸುವ ಜನಪರ ನಾಯಕನನ್ನು ಆಯ್ಕೆ ಮಾಡಲು ಮತದಾನ ಪ್ರಕ್ರಿಯೆ ನಡೆಯುತ್ತದೆ. ಮತದಾನದ ಪ್ರಾಮುಖ್ಯತೆ ಮತ್ತು ಪ್ರಜೆಗಳ ಮೇಲಿರುವ ಜವಾಬ್ದಾರಿಯ ಕುರಿತು ಜಾಗೃತಿ ಮೂಡಿಸುವುದಕ್ಕಾಗಿಯೇ ಪ್ರತಿವರ್ಷ ಜನವರಿ 25ರಂದು ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸಲಾಗುತ್ತದೆ.

ಭಾರತದ ಚುನಾವಣಾ ಆಯೋಗ ಸ್ಥಾಪನೆಯಾಗಿದ್ದು 1950ರ ಜನವರಿ 25ರಂದು. ಹೀಗಾಗಿ ರಾಷ್ಟ್ರಾದ್ಯಂತ ಪ್ರತಿವರ್ಷ ಜನವರಿ 25 ರಂದು ರಾಷ್ಟ್ರೀಯ ಮತದಾರರ ದಿನವನ್ನಾಗಿ ಆಚರಿಸಲಾಗುತ್ತಿದೆ. ಗ್ರಾಮೀಣ ಪ್ರದೇಶಗಳಿಂತ ನಗರ ಪ್ರದೇಶಗಳಲ್ಲಿ ಕಡಿಮೆ ಪ್ರಮಾಣದ ಮತದಾನವಾಗುತ್ತಿದೆ. ವಿದ್ಯಾವಂತರು ಹೆಚ್ಚಿರುವ ನಗರ ಪ್ರದೇಶದಲ್ಲಿ ಮತದಾನವನ್ನು ನಿರ್ಲಕ್ಷ್ಯಿಸುತ್ತಿರುವುದು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದೆ. ಮತದಾನ ಜವಾಬ್ದಾರಿಯ ಅರಿವಿದ್ದೂ ದೂರ ಉಳಿಯುವ ವಿದ್ಯಾವಂತರಿಗೆ ಹಾಗೂ ಅರಿವಿಲ್ಲದೆ ದೂರ ಉಳಿಯುವ ಅವಿದ್ಯಾವಂತರಿಗೆ ಮತದಾನದ ಬಗ್ಗೆ ಅರಿವು ಮೂಡಿಸುವುದು, 18 ವರ್ಷ ಮೇಲ್ಪಟ್ಟ ಎಲ್ಲ ಪ್ರಜೆಗಳೂ ಚುನಾವಣಾ ಸಂದರ್ಭದಲ್ಲಿ ಖಡ್ಡಾಯವಾಗಿ ಮತದಾನ ಮಾಡಬೇಕೆಂಬ ಸಂದೇಶ ಸಾರುವುದಕ್ಕಾಗಿ ಹಾಗೂ ಅವರಲ್ಲಿ ಮತದಾನದ ಹಕ್ಕು ಪಡೆಯುವಂತೆ ಸ್ಫೂರ್ತಿ ನೀಡುವುದು, ಆ ಹಕ್ಕಿನ ಕುರಿತು ಜಾಗೃತಿ ಮೂಡಿಸುವುದು ರಾಷ್ಟ್ರೀಯ ಮತದಾರರ ದಿನದ ಉದ್ದೇಶವಾಗಿದೆ.

 

 

 

 

 

 

 

 

 

CRIME NEWS

ಕಳವು ಪ್ರಕರಣ

ದಿನಾಂಕ: 22-01-2021 ರಂದು ಸೋಮವಾರಪೇಟೆ ತಾಲ್ಲೂಕು ತೊರೆನೂರು ಗ್ರಾಮದ ನಿವಾಸಿ ಟಿ.ಡಿ ಶಿವರಾಜ್‍ ಎಂಬುವವರು ಅವರ ಮನೆಗೆ ಬೀಗ ಹಾಕಿಕೊಂಡು ಕುಟುಂಬದವರೊಂದಿಗೆ ಸಂಬಂದಿಕರ ಮನೆಗೆ ಹೋಗಿ ವಾಪಾಸ್ಸು ದಿನಾಂಕ: 24-01-2021 ರಂದು ಬಂದು ನೋಡಿದಾಗ ಯಾರೋ ಕಳ್ಳರು ಮನೆಯ ಮೇಲ್ಛಾವಣಿ ಹಂಚನ್ನು ತೆಗೆದು ಬೀರುವಿನಲ್ಲಿಟ್ಟಿದ್ದ ₹. 5,000  ನಗದು ಮತ್ತು ₹. 60,000 ಬೆಲೆಬಾಳುವ ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಕ್ಷುಲ್ಲಕ ಕಾರಣಕ್ಕೆ ಅವಾಚ್ಯ ಪದಗಳಿಂದ ಬೈದು ಬೆದರಿಕೆ.

ದಿನಾಂಕ: 24-01-2021 ರಂದು ರಾತ್ರಿ ಮಡಿಕೇರಿ ನಗರದ ಮಂಗಳೂರು ರಸ್ತೆಯಲ್ಲಿರುವ ಹೆಚ್.ಪಿ.ಸಿ.ಎಲ್ ಪೆಟ್ರೋಲ್‍ ಬಂಕ್‍ ನಲ್ಲಿ  ಮಡಿಕೇರಿ ನಿವಾಸಿಗಳಾದ ಲೋಕೇಶ್‍ ಮತ್ತು ಯಶವಂತ್‍ ಎಂಬುವವರು ಕೆಎ-20—ಎಂಬಿ-0464 ರ ಕಾರಿನಲ್ಲಿ ಹೋಗಿ ಇಂಧನ ಹಾಕಿಸಿಕೊಂಡ ನಂತರ ಕ್ಷುಲ್ಲಕ ಕಾರಣಕ್ಕೆ ಬಂಕ್‍ ನ ಕೆಲಸಗಾರರಿಗೆ ಅವಾಚ್ಯ ಪದಗಳಿಂದ ಬೈದು ಕೊಲೆ ಬೆದರಿಕೆ ಹಾಕಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಮಡಿಕೇರಿ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.