News

ಪೊಲೀಸ್ ಹುತಾತ್ಮರ ದಿನಾಚರಣೆ

ಪ್ರತಿ ವರ್ಷದಂತೆ ದಿನಾಂಕ 21-10-2019 ರಂದು ದೇಶದಾದ್ಯಂತ ಪೊಲೀಸ್ ಹುತಾತ್ಮರ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು ಅದರಂತೆ ಕೊಡಗು ಜಿಲ್ಲಾ ಪೊಲೀಸ್ ವತಿಯಿಂದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ನಡೆಸಲಾಯ್ತು.  ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀ  ವೀರಪ್ಪ ವಿ. ಮಲ್ಲಾಪುರ್ ರವರು ಆಗಮಿಸಿದ್ದರು. 

ಕಾರ್ಯಕ್ರಮಕ್ಕೆ ಆಗಮಿಸಿದ್ದ ಗಣ್ಯರಿಂದ ಪೊಲೀಸ್ ಹುತಾತ್ಮರ ಸ್ಮಾರಕ್ಕೆ ಪುಷ್ಪಗುಚ್ಛಗಳನ್ನು ಅರ್ಪಿಸಲಾಯಿತು.  ನಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ: ಸುಮನ್ ಡಿ. ಪೆನ್ನೇಕರ್‍ ರವರು 2018-19ನೇ ಸಾಲಿನಲ್ಲಿ ಕರ್ತವ್ಯದ ವೇಳೆಯಲ್ಲಿ ಹುತಾತ್ಮರಾದ ದೇಶದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳ ಹೆಸರುಗಳನ್ನು ಓದುವ ಮೂಲಕ ಸ್ಮರಿಸಿದರು.  ನಂತರ ಹುತಾತ್ಮರ ಗೌರವಾರ್ಥ ಮೂರು ಸುತ್ತು ಕುಶಾಲತೋಪುಗಳನ್ನು ಹಾರಿಸಿ ಮೌನವನ್ನು ಆಚರಿಸಲಾಯಿತು. 

ಕಾರ್ಯಕ್ರಮಕ್ಕೆ ಜಿಲ್ಲೆಯ ನಿವೃತ್ತ ಸೇನಾಧಿಕಾರಿಗಳು, ನಿವೃತ್ತ ಪೊಲೀಸ್  ಅಧಿಕಾರಿಗಳು ಇತರೆ ಗಣ್ಯ ವ್ಯಕ್ತಿಗಳು ಹಾಜರಿದ್ದು ಎ.ಆರ್‍.ಎಸ್‍.ಐ ಅಂತೋಣಿ ಡಿ’ಸೋಜರವರು ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

CRIME NEWS

ಬೈಕ್ ಡಿಕ್ಕಿಯಾಗಿ ಗಾಯಗೊಂಡಿದ್ದ ವ್ಯಕ್ತಿ ಸಾವು

ದಿನಾಂಕ 17-10-2019 ರಂದು ಬೆಳಗ್ಗೆ 9-00 ಗಂಟೆಗೆ ಜವರಯ್ಯ ಎಂಬವರು ರಸ್ತೆ ದಾಟುತ್ತಿದ್ದಾಗ ಕುಶಾಲನಗರದ ಕಡೆಯಿಂದ ಗಿಡ್ಡೆಗೌಡ ಎಂಬವರು ತಮ್ಮ ಬಾಪ್ತು ಮೋಟಾರ್‍ ಸೈಕಲನ್ನು ಅತೀ ವೇಗ ಮತ್ತು ಅಜಾಗರೂಕತೆಯಿಂದ ಚಾಲನೆಮಾಡಿಕೊಂಡು ಬಂದು ರಸ್ತೆದಾಟುತ್ತಿದ್ದ ಜವರಯ್ಯನವರಿಗೆ  ಡಿಕ್ಕಿಪಡಿಸಿದ ಪರಿಣಾಮ ಅವರ ತಲೆ ಮತ್ತು ಶರೀರಕ್ಕೆ ಗಾಯಗಳಾಗಿ ಆಸ್ತ್ರತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈ ಸಂಬಂಧ ಕುಶಾಲನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ ಪೊಲೀಸರು ತನಿಖೆ ಕೈಗೊಂಡಿದ್ದರು. ಚಿಕಿತ್ಸೆ ಫಲಕಾರಿಯಾಗದೇ ದಿನಾಂಕ: 19-10-2019 ರಂದು ಜವರಯ್ಯರವರು ಮೃತಪಟ್ಟಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಕೋವಿಯಿಂದ ಗುಂಡು ಹಾರಿಸಿ ವ್ಯಕ್ತಿಯ ಕೊಲೆ ಯತ್ನ ಪ್ರಕರಣ     

        ದಿನಾಂಕ:20-10-2019 ರಂದು ಸೋಮವಾರಪೇಟೆ ಪಟ್ಟಣದ ಕಾನ್ವೆಂಟ್ ಬಾಣೆ ನಿವಾಸಿ ಸುಜಿತ್ ಎಂಬುವವರಿಗೆ ಕಾನ್ವೆಂಟ್ ಬಾಣೆ ನಿವಾಸಿ ಗಣಪತಿ ಎಂಬುವವರು ವಿನಾಕಾರಣ ಅವಾಚ್ಯ ಪದಗಳಿಂದ ಬೈದುದನ್ನು ಕೇಳಿದಾಗ ಎಕಾಏಕಿ ಗಣಪತಿಯವರು ತನ್ನ ಕಾರಿನಲ್ಲಿದ್ದ ಕೋವಿಯನ್ನು ತೆಗೆದು ಗುಂಡು ಹೊಡೆದಾಗ ಗುಂಡು ಸುಜಿತ್ ರವರ ಎದೆಗೆ ತಗುಲಿ ಗಾಯಗೊಂಡಿದ್ದು ಈ ಬಗ್ಗೆ ಸುಜಿತ್ ರವರು ನೀಡಿದ ಪುಕಾರಿನ ಮೇರೆ ಸೋಮವಾರಪೇಟೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.